ದೇಶ

ಡಿಆರ್‌ಡಿಒ, ಸೇನೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ಪಾಕ್‌ನೊಂದಿಗೆ ಹಂಚಿಕೆ; ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು

Ramyashree GN

ನವದೆಹಲಿ: ಡಿಫೆನ್ಸ್ ರಿಸರ್ಚ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ಮತ್ತು ಸೇನೆಯ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಿ ವಿದೇಶಗಳ ಗುಪ್ತಚರ ಸಂಸ್ಥೆಗಳೊಂದಿಗೆ ಹಂಚಿಕೊಂಡ ಆರೋಪದ ಮೇಲೆ ಅರೆಕಾಲಿಕ ಪತ್ರಕರ್ತನ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿವೇಕ್ ರಘುವಂಶಿ ಎಂಬಾತನ ವಿರುದ್ಧ ಅಧಿಕಾರಿಗಳ ರಹಸ್ಯ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಘುವಂಶಿ ಡಿಆರ್‌ಡಿಒ ಮತ್ತು ಸೇನೆಯ ಯೋಜನೆಗಳ 'ಸೂಕ್ಷ್ಮ' ಮತ್ತು 'ಅತಿಸೂಕ್ಷ್ಮ' ವಿವರಗಳನ್ನು ಸಂಗ್ರಹಿಸಿದ್ದಾರೆ ಮತ್ತು ಅವುಗಳನ್ನು ವಿದೇಶಗಳ ಗುಪ್ತಚರ ಸಂಸ್ಥೆಗಳೊಂದಿಗೆ ಹಂಚಿಕೊಂಡಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಜೈಪುರ ಮತ್ತು ರಾಷ್ಟ್ರೀಯ ರಾಜಧಾನಿ ದೆಹಲಿಯ 12 ಸ್ಥಳಗಳಲ್ಲಿ ಸಂಸ್ಥೆ ಶೋಧ ನಡೆಸುತ್ತಿದ್ದು, ಸೂಕ್ಷ್ಮ ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

SCROLL FOR NEXT