ರಾಹುಲ್ ಗಾಂಧಿ 
ದೇಶ

ಜೂನ್ 4 ರಂದು ಅಮೆರಿಕದ ಮ್ಯಾಡಿಸನ್ ಸ್ಕ್ವೇರ್ ನಲ್ಲಿ ರಾಹುಲ್ ಗಾಂಧಿ ರ್‍ಯಾಲಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೇ ತಿಂಗಳ 30 ರಂದು 10 ದಿನಗಳ ಅಮೆರಿಕ ಭೇಟಿ ಕೈಗೊಳ್ಳಲಿದ್ದಾರೆ. ಜೂನ್ 4 ರಂದು ರಾಹುಲ್ ಗಾಂಧಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರ್‍ಯಾಲಿ ನಡೆಸಲಿದ್ದಾರೆ. ಇದರಲ್ಲಿ ಸುಮಾರು 5,000 ಅನಿವಾಸಿ ಭಾರತೀಯರು ಭಾಗವಹಿಸಲಿದ್ದಾರೆ ಎಂದು  ಮೂಲಗಳು ಮಂಗಳವಾರ ತಿಳಿಸಿವೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೇ ತಿಂಗಳ 30 ರಂದು 10 ದಿನಗಳ ಅಮೆರಿಕ ಭೇಟಿ ಕೈಗೊಳ್ಳಲಿದ್ದಾರೆ. ಜೂನ್ 4 ರಂದು ರಾಹುಲ್ ಗಾಂಧಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರ್‍ಯಾಲಿ ನಡೆಸಲಿದ್ದಾರೆ. ಇದರಲ್ಲಿ ಸುಮಾರು 5,000 ಅನಿವಾಸಿ ಭಾರತೀಯರು ಭಾಗವಹಿಸಲಿದ್ದಾರೆ ಎಂದು  ಮೂಲಗಳು ಮಂಗಳವಾರ ತಿಳಿಸಿವೆ.

ಇದಲ್ಲದೆ, ಅವರು ಪ್ಯಾನೆಲ್ ಡಿಸ್ಕಶನ್ ಗಾಗಿ ವಾಷಿಂಗ್ಟನ್ ಹಾಗೂ ಕ್ಯಾಲಿಫೋರ್ನಿಯಾಗೆ ಭೇಟಿ ನೀಡಲಿದ್ದಾರೆ.  ಅಲ್ಲದೇ ಸ್ಟಾನ್ ಫೋರ್ಡ್ ವಿವಿಯಲ್ಲಿ ಭಾಷಣ ಮಾಡಲಿದ್ದಾರೆ. ರಾಜಕಾರಣಿಗಳು ಮತ್ತು ಉದ್ಯಮಿಗಳನ್ನು ಕೂಡಾ ರಾಹುಲ್ ಭೇಟಿಯಾಗಲಿದ್ದಾರೆ. 

ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಜೂನ್ 22 ರಂದು ಅಮೆರಿಕಕ್ಕೆ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ.  ಅವರ ಭೇಟಿ ವೇಳೆ  ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬಿಡೆನ್ ಅವರು ಶ್ವೇತಭವನದಲ್ಲಿ ಆತಿಥ್ಯ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕಳೆದ ವಾರ ತಿಳಿಸಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT