ದೇಶ

ಪಶ್ಚಿಮ ಬಂಗಾಳ: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 7 ಮಂದಿ ಸಾವು

Lingaraj Badiger

ನವದೆಹಲಿ: ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಏಳು ಜನ ಸಾವನ್ನಪ್ಪಿದ್ದಾರೆ ಎಂದು ಪೂರ್ವ ಮಿಡ್ನಾಪುರದ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಎಗ್ರಾದಲ್ಲಿರುವ ಅಕ್ರಮ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಮತ್ತು ಇತರ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬದ ನೆರವಿಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಜನ ತಮ್ಮ ಪ್ರದೇಶದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಗಳಿದ್ದರೆ ಮಾಹಿತಿ ನೀಡಬೇಕು. ಅವುಗಳ ವಿರುದ್ಧ ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ರಾಜ್ಯ ಪರಿಸರ ಸಚಿವ ಮಾನಸ್ ರಂಜನ್ ಭುನಿಯಾ ಅವರು ಹೇಳಿದ್ದಾರೆ.

SCROLL FOR NEXT