ಸಾಂದರ್ಭಿಕ ಚಿತ್ರ 
ದೇಶ

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಕಾರು-ಟ್ರಕ್ ಢಿಕ್ಕಿ, 7 ಮಂದಿ ಸಾವು

ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎಸ್ ಯುವಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟಿದ್ದಾರೆ.

ವಿಜಯವಾಡ: ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎಸ್ ಯುವಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟಿದ್ದಾರೆ.

ಆಂಧ್ರ ಪ್ರದೇಶದ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆ ಬಳಿಯ ಕಡಪ-ತಾಡಿಪತ್ರಿ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು, ಮೃತರೆಲ್ಲರೂ ತಿರುಪತಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದರು ಎಂದು ತಿಳಿದುಬಂದಿದೆ.

ಕಡಪ-ತಾಡಿಪತ್ರಿ ಹೆದ್ದಾರಿಯಲ್ಲಿ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆ ಬಳಿ ಎಸ್‌ಯುವಿ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಮಹಿಳೆಯರು ಮತ್ತು ಮಕ್ಕಳು ಸೇರಿ 7 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. 

ಆಟೋ-ಲಾರಿ ಢಿಕ್ಕಿ 6 ಸಾವು
ಮತ್ತೊಂದು ಘಟನೆಯಲ್ಲಿ ಪಲ್ನಾಡು ಜಿಲ್ಲೆಯ ದಾಚೆಪಲ್ಲಿ ಮಂಡಲದಲ್ಲಿ ಇಂದು ಬೆಳಿಗ್ಗೆ ವೇಗವಾಗಿ ಬಂದ ಲಾರಿಯೊಂದು ಆಟೊರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಕೂಲಿ ಕಾರ್ಮಿಕರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.

ಆಟೊರಿಕ್ಷಾದಲ್ಲಿ 12 ಮಂದಿ ಕಾರ್ಮಿಕರು ರಾಮಾಲಯದ ಕಡೆಗೆ ಪ್ರಯಾಣಿಸುತ್ತಿದ್ದಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಗುರಜಾಲ ಮತ್ತು ಮಿರ್ಯಾಲಗೂಡ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಆಟೋ ದಾಮರಚಾರ್ಲ ಮಂಡಲದ ನರಸಾಪುರದಿಂದ ಗುರ್ಜಾಲ ಮಂಡಲದ ಪುಲಿಪಾಡು ಕಡೆಗೆ ಅಪಘಾತಕ್ಕೀಡಾಗಿದೆ. ಅಪಘಾತದ ವೇಳೆ ಆಟೋದಲ್ಲಿ 23 ತೆಲಂಗಾಣ ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಮೃತ ಐವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. 

ಡಿಕ್ಕಿಯ ರಭಸಕ್ಕೆ ಮೃತದೇಹಗಳು 50 ಮೀಟರ್ ದೂರದಲ್ಲಿ ಬಿದ್ದಿದ್ದವು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಆಟೊಗೆ ಡಿಕ್ಕಿ ಹೊಡೆದ ಬಳಿಕ ಲಾರಿ ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel