ಜುನ್ಮೋನಿ ರಾಭಾ 
ದೇಶ

'ಲೇಡಿ ಸಿಂಗಂ' ಖ್ಯಾತಿಯ ವಿವಾದಾತ್ಮಕ ಪೊಲೀಸ್‌ ಅಧಿಕಾರಿ ಜುನ್ಮೋನಿ ರಾಭಾ ಅಪಘಾತದಲ್ಲಿ ಸಾವು!

ಅಸ್ಸಾಂನಲ್ಲಿ ಲೇಡಿ ಸಿಂಗಂ, ದಬಾಂಗ್ ಕಾಪ್‌ ಎಂದು ಖ್ಯಾತಿಯಾಗಿದ್ದ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು.

ನಾಗೂನ್‌: ಅಸ್ಸಾಂನಲ್ಲಿ ಲೇಡಿ ಸಿಂಗಂ, ದಬಾಂಗ್ ಕಾಪ್‌ ಎಂದು ಖ್ಯಾತಿಯಾಗಿದ್ದ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು.

ನಾಗೂನ್‌ ನಗರದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಅವರ ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಅವರು ಒಬ್ಬರೇ ಇದ್ದರು ಎನ್ನಲಾಗಿದ್ದು ಪೊಲೀಸ್ ಸಮವಸ್ತ್ರದಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.

ಜುನ್ಮೋನಿ ರಾಭಾ ಅಸ್ಸಾಂ ಪೊಲೀಸ್‌ ಇಲಾಖೆಯಲ್ಲಿ ಎಸ್‌ಐ ಆಗಿ ಕೆಲಸ ಮಾಡುತ್ತಿದ್ದರು. ವಿವಾದಗಳಿಂದಾಗಿ ಅವರು ಹಲವು ಸಲ ಅಮಾನತುಗೊಂಡಿದ್ದರು. ಹಲವು ಕಷ್ಟಕರ ಪ್ರಕರಣಗಳನ್ನು ಧೈರ್ಯವಾಗಿ ಎದುರಿಸಿದ್ದ ಅವರು, ಉದ್ಯೋಗದ ಹೆಸರಿನಲ್ಲಿ ವಂಚಿಸಿದ್ದ ಭಾವಿ ಪತಿಯನ್ನು ಬಂಧಿಸಿ ಪ್ರಶಂಸೆ ಪಡೆದಿದ್ದರು.

ಅಸ್ಸಾಂ ಪೊಲೀಸ್‌ ಅಧಿಕಾರಿಗಳು ಜುನ್ಮೋನಿ ರಾಭಾ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ. ಜುನ್ಮೋನಿ ರಾಭಾ ಅವರು ಬಾಲಿವುಡ್ ಸಿನಿಮಾಗಳ ನಂತರ ಲೇಡಿ ಸಿಂಗಂ, ದಬಾಂಗ್ ಕಾಪ್ ಎಂದು ಜನಪ್ರಿಯತೆ ಗಳಿಸಿದ್ದರು. ಜೊತೆಗೆ ವಿವಾದಗಳ ಕಾರಣಕ್ಕೂ ಸುದ್ದಿಯಾಗಿದ್ದರು.

ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕಂಟೈನರ್ ಟ್ರಕ್ ವಶಪಡಿಸಿಕೊಂಡಿರುವ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ. ಸಬ್ ಇನ್ಸ್ ಪೆಕ್ಟರ್ ರಾಭಾ ಒಬ್ಬರೇ ಎಲ್ಲಿಗೆ ಹೋಗುತ್ತಿದ್ದರು ಎಂಬುದು ಮನೆಯವರಿಗಾಗಲಿ, ಪೊಲೀಸರಿಗಾಗಲಿ ಗೊತ್ತಿಲ್ಲ. ರಾಭಾ ಮೊರಿಕೊಲೊಂಗ್ ಪೊಲೀಸ್ ಪೋಸ್ಟ್‌ನ ಉಸ್ತುವಾರಿ ವಹಿಸಿದ್ದರು. ಜುನ್ಮೋನಿ ರಾಭಾ ಅವರ ಸಾವು ನಿಗೂಢ ಎಂದು ಬಣ್ಣಿಸಿರುವ ಕುಟುಂಬವು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್