ಅರ್ಪಿತಾ-ಸಲ್ಮಾನ್ ಖಾನ್ 
ದೇಶ

ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಶರ್ಮಾ ಮನೆಯಲ್ಲಿ ಕಳ್ಳತನ: ಮನೆ ಕೆಲಸದವನ ಬಂಧನ

ಬಾಲಿವುಡ್ ನಟ ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಮನೆಯಲ್ಲಿ ಕಳ್ಳತನವಾಗಿದೆ. ಇದಾದ ಬಳಿಕ ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಅರ್ಪಿತಾ ಖಾನ್ ಅವರ ಮನೆ ಕೆಲಸದವನನ್ನು ಬಂಧಿಸಿದ್ದಾರೆ. 

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಮನೆಯಲ್ಲಿ ಕಳ್ಳತನವಾಗಿದೆ. ಇದಾದ ಬಳಿಕ ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಅರ್ಪಿತಾ ಖಾನ್ ಅವರ ಮನೆ ಕೆಲಸದವನನ್ನು ಬಂಧಿಸಿದ್ದಾರೆ. 

ಅರ್ಪಿತಾ ಖಾನ್ ಅವರ ಖಾರ್ ನಿವಾಸದಿಂದ ವಜ್ರದ ಕಿವಿಯೋಲೆ ಕಳ್ಳತನವಾಗಿತ್ತು. ಇದೀಗ ಮುಂಬೈ ಪೊಲೀಸರು ಅದನ್ನು ವಶಪಡಿಸಿಕೊಂಡು ಕಳ್ಳನನ್ನು ಹಿಡಿದಿದ್ದಾರೆ.

ಮುಂಬೈ ಪೊಲೀಸರು ಚಿನ್ನಾಭರಣ ಕದ್ದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಖಾರ್ ಪೊಲೀಸರು ಕಳ್ಳನನ್ನು ಹಿಡಿದಿದ್ದಾರೆ. ಮುಂಬೈನ ವಿಲೇಪಾರ್ಲೆ ಪ್ರದೇಶದಲ್ಲಿ ವಾಸವಾಗಿರುವ ಆತ ಅರ್ಪಿತಾ ಖಾನ್ ಅವರ ಮನೆಯಲ್ಲಿ ಮನೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದನು. ಈ ಹಿಂದೆ ಅರ್ಪಿತಾ ಖಾನ್ ತನ್ನ ಮೇಕಪ್ ಟ್ರೇನಲ್ಲಿಟ್ಟಿದ್ದ ₹5 ಲಕ್ಷ ಮೌಲ್ಯದ ಕಿವಿಯೋಲೆಗಳು ಮನೆಯಿಂದ ನಾಪತ್ತೆಯಾಗಿವೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಈ ಘಟನೆ ನಡೆದಿದ್ದು ಮೇ 16 ರಂದು. ಅದೇ ರಾತ್ರಿ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಖಾರ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮೋಹನ್ ಮಾನೆ ತಂಡಕ್ಕೆ ಮಾಹಿತಿ ನೀಡಿದ್ದು, ಅವರು ಮನೆಗೆಲಸದವರನ್ನು ಬಂಧಿಸಿದ್ದಾರೆ. ಆರೋಪಿಯನ್ನು ಹೊರತುಪಡಿಸಿ 11 ಮಂದಿ ಇದೇ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಆಭರಣಗಳನ್ನು ಕದ್ದು ಯಾರಿಗೂ ತಿಳಿಸದೆ ಪರಾರಿಯಾಗಿದ್ದನು. ಕಳುವಾಗಿದ್ದ ಆಭರಣವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆತನ ವಿರುದ್ಧ ಸೆಕ್ಷನ್ 381ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT