ದೇಶ

ಭಯದ ವಾತಾವರಣ ಸೃಷ್ಟಿಸಬೇಡಿ: ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್‌ ಚಾಟಿ

Shilpa D

ನವದೆಹಲಿ: ಭಯದ ವಾತಾವರಣ ಸೃಷ್ಟಿ ಮಾಡಬೇಡಿ ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್‌ ಹೇಳಿದೆ. ಕೇಂದ್ರ ಸರಕಾರವು ಸಿಬಿಐ, ಇ.ಡಿ ಮುಂತಾದ ತನಿಖಾ ಸಂಸ್ಥೆಗಳು ರಾಜಕೀಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್‌ ಹೇಳಿಕೆ ಮಹತ್ವ ಪಡೆದಿದೆ.

ಛತ್ತೀಸ್‌ಗಢ ಅಬಕಾರಿ ಹಗರಣಲ್ಲಿ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರನ್ನು ಸಿಲುಕಿಸಿ ಹಾಕಲು ಜಾರಿ ನಿರ್ದೇಶನಾಲಯ ಪ್ರಯತ್ನಿಸುತ್ತಿದೆ ಎಂದು ರಾಜ್ಯ ಸರ್ಕಾರ ವಿಚಾರಣೆ ವೇಳೆ ಆರೋಪಿಸಿದೆ. ಈ ವೇಳೆ ಸುಪ್ರೀಂ ಕೋರ್ಟ್‌ ಹೀಗೆ ಹೇಳಿದೆ.

ಛತ್ತೀಸ್‌ಗಢದ ಸುಮಾರು 2000 ಕೋಟಿ ರೂ ಅಬಕಾರಿ ಹಗರಣದಲ್ಲಿ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರನ್ನು ಸಿಲುಕಿಸಲು ಜಾರಿ ನಿರ್ದೇಶನಾಲಯ ಪ್ರಯತ್ನಿಸುತ್ತಿದೆ ಎಂದು ರಾಜ್ಯ ಸರಕಾರ ವಿಚಾರಣೆ ವೇಳೆ ಆರೋಪಿಸಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಈ ಸಲಹೆ ನೀಡಿದೆ.

'ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ'ಯ (ಪಿಎಂಎಲ್‌ಎ) ಹಲವು ನಿಯಮಾವಳಿಗಳ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಛತ್ತೀಸಗಢ ಸರಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಇದರ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿದೆ. ರಾಜ್ಯದ ಅಬಕಾರಿ ಇಲಾಖೆಯ ಅನೇಕ ಅಧಿಕಾರಿಗಳು ಬಂಧಿಸುವುದಾಗಿ ತಮಗೆ ಹಾಗೂ ತಮ್ಮ ಕುಟುಂಬದ ಸದಸ್ಯರಿಗೆ ಜಾರಿ ನಿರ್ದೇಶನಾಲಯ ಬೆದರಿಕೆ ಹಾಕುತ್ತಿದೆ ಮತ್ತು ಸಿಎಂ ಅವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದೆ ಎಂದು ಛತ್ತೀಸಗಡ ಸರಕಾರ ಆರೋಪಿಸಿದೆ.

SCROLL FOR NEXT