ಶಾಸಕ ಇರ್ಫಾನ್ ಅನ್ಸಾರಿ. 
ದೇಶ

ಜಾರ್ಖಾಂಡ್: ದೇಶದಲ್ಲೇ ಅತಿದೊಡ್ಡ ಹನುಮ ಮಂದಿರ ನಿರ್ಮಾಣಕ್ಕೆ ಮುಸ್ಲಿಂ ಶಾಸಕ ಮುಂದು!

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಹರ್ಷಗೊಂಡಿರುವ ಜಾರ್ಖಾಂಡ್ ರಾಜ್ಯದ ಕಾಂಗ್ರೆಸ್ ಪಕ್ಷದ ಮುಸ್ಲಿಂ ಶಾಸಕರೊಬ್ಬರು ದೇಶದಲ್ಲಿಯೇ ಅತಿದೊಡ್ಡ ಹನುಮ ಮಂದಿರ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ರಾಂಚಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಹರ್ಷಗೊಂಡಿರುವ ಜಾರ್ಖಾಂಡ್ ರಾಜ್ಯದ ಕಾಂಗ್ರೆಸ್ ಪಕ್ಷದ ಮುಸ್ಲಿಂ ಶಾಸಕರೊಬ್ಬರು ದೇಶದಲ್ಲಿಯೇ ಅತಿದೊಡ್ಡ ಹನುಮ ಮಂದಿರ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಶಾಸಕ ಇರ್ಫಾನ್ ಅನ್ಸಾರಿಯವರು ತಮ್ಮ ವಿಧಾನಸಭಾ ಕ್ಷೇತ್ರವಾದ ಜಮ್ತಾರಾದಲ್ಲಿ ದೇಶದ ಅತಿದೊಡ್ಡ ಹನುಮಾನ್ ಮಂದಿರವನ್ನು ನಿರ್ಮಿಸುವುದಾಗಿ ಘೋಷಿಸಿದ್ದಾರೆ.

ಕರ್ನಾಟಕಗಲ್ಲಿ ಪಕ್ಷವು ಬಹುಮತದಿಂದ ಗೆಲುವು ಸಾಧಿಸಿರುವುದು ಹನುಮಂತನ ಮೇಲಿನ ನನ್ನ ನಂಬಿಕೆ ಹೆಚ್ಚಾಗುವಂತೆ ಮಾಡಿದೆ. ಹನುಮಂತ ಎಲ್ಲರಿಗೂ ಸೇರಿದವನು. ಪಕ್ಷದ ಗೆಲುವು ಬಳಿಕ ಹನುಮಂತನ ದೇವಸ್ಥಾನಕ್ಕೆ ತೆರಳಿದೆ ಎಂದು ಅನ್ಸಾರಿಯವರು ಹೇಳಿದ್ದಾರೆ.

ಇದೇ ವೇಳೆ ದೇವಸ್ಥಾನ ನಿರ್ಮಾಣಕ್ಕೆ ಹಣ ಹೊಂದಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಕಿಡ್ನಿ ಮಾರಿಯಾದರೂ ದೇವಸ್ಥಾನ ನಿರ್ಮಾಣ ಮಾಡುತ್ತೇನೆಂದು ತಿಳಿಸಿದರು.

ಈಗಾಗಲೇ ದೇವಸ್ಥಾನ ನಿರ್ಮಾಣಕ್ಕೆ ಸ್ಥಳ ಗುರ್ತಿಸಲಾಗಿದೆ. ಶೀಘ್ರದಲ್ಲಿಯೇ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದರು.

ಬಳಿಕ ಬಜರಂಗಳ ನಿಷೇಧ ಕುರಿತ ಪ್ರಶ್ನೆಗೆ ಉತ್ತರಿಸಿ, ಹನುಮ ಹಾಗೂ ಆತನ ಭಕ್ತರ ಬಾಯಿಗೆ ಬೀಗ ಹಾಕುವ ಯತ್ನ ಇದಾಗಿದೆ ಎಂಬು ಬಿಜೆಪಿ ಎಲ್ಲಾ ಸಾರ್ವಜನಿಕ ಸಭೆಯಲ್ಲಿಯೂ ಹೇಳಿತ್ತು. ಜೈ ಬಜರಂಗಬಲಿ ಎಂದು ಘೋಷಣೆ ಕೂಗಿತ್ತು. ನರೇಂದ್ರ ಮೋದಿಯವರು ‘ಜೈ ಬಜರಂಗಬಲಿ’ ಎಂದು ಕೂಗಿದ್ದರು. ಮೋದಿಯವರು ಹನುಮಂತನನ್ನು ಭಜರಂಗದಳದೊಂದಿಗೆ ಸಮೀಕರಿಸುವ ಮೂಲಕ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ, ಕೂಡಲೇ ಈ ಕುರಿತು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!