ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮೇ 19ರಿಂದ ಆಸ್ಟ್ರೇಲಿಯಾ ಸೇರಿ ಮೂರು ದೇಶಗಳಿಗೆ ಮೋದಿ ಪ್ರವಾಸ

ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದೇಶಗಳಾದ ಜಪಾನ್, ಪಪುವಾ ನ್ಯೂಗಿನಿಯಾ, ಆಸ್ಟ್ರೇಲಿಯಾಕ್ಕೆ ಇದೇ ತಿಂಗಳ 19 ರಿಂದ 24 ರವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ.

ಪ್ರಧಾನಿ ಮೋದಿ
Srinivasa Murthy VN
Updated On : 17 May 2023, 6:13 pm

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದೇಶಗಳಾದ ಜಪಾನ್, ಪಪುವಾ ನ್ಯೂಗಿನಿಯಾ, ಆಸ್ಟ್ರೇಲಿಯಾಕ್ಕೆ ಇದೇ ತಿಂಗಳ 19 ರಿಂದ 24 ರವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ.

ಗ್ರೂಪ್ ಆಫ್ ಸೆವೆನ್ ಜಿ – 7 ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕ್ವಾಡ್ ಸೇರಿದಂತೆ ಮೂರು ಪ್ರಮುಖ ಬಹುಪಕ್ಷೀಯ ಶೃಂಗಸಭೆಗಳಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಕ್ಕೆ ಆರು ದಿನಗಳ ಪ್ರವಾಸವನ್ನು ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಕರ್ನಾಟಕ ಗೆದ್ದಾಕ್ಷಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದರ್ಥವಲ್ಲ: ಪ್ರಶಾಂತ್ ಕಿಶೋರ್

Advertisement

Advertisement

ಜಪಾನ್ ಅಧ್ಯಕ್ಷ ಕಿಶಿದಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಆ ದೇಶಕ್ಕೆ ಪ್ರಯಾಣಿಸುತ್ತಿದ್ದು, ತಮ್ಮ ಪ್ರವಾಸದ ಮೊದಲ ಹಂತದಲ್ಲಿ, ಪ್ರಧಾನಿ ಅವರು ಮೇ 19 ರಿಂದ 21 ರವರೆಗೆ ಜಪಾನಿನ ನಗರವಾದ ಹಿರೋಷಿಮಾಕ್ಕೆ ಭೇಟಿ ನೀಡಲಿದ್ದು, ಜಿ-7 ಮುಂದುವರಿದ ಆರ್ಥಿಕತೆಗಳ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ. ಈ ಸಭೆಯಲ್ಲಿ ಆಹಾರ, ರಸಗೊಬ್ಬರ ಮತ್ತು ಇಂಧನ ಭದ್ರತೆ ಸೇರಿದಂತೆ ಜಾಗತಿಕವಾಗಿ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಮಾತನಾಡುವ ನಿರೀಕ್ಷೆಯಿದೆ ಎಂದು ತಿಳಿಸಿದೆ. 

ಜಪಾನ್‌ನಿಂದ, ಪ್ರಧಾನಿ ಮೋದಿ ಅವರು ಪಪುವಾ ನ್ಯೂಗಿನಿಯಾದ ಪೋರ್ಟ್ ಮೊರೆಸ್ಬಿಗೆ ಪ್ರಯಾಣಿಸಲಿದ್ದಾರೆ, ಅಲ್ಲಿ ಅವರು ಮೇ 22 ರಂದು ಪ್ರಧಾನಿರೊಂದಿಗೆ ಜಂಟಿಯಾಗಿ ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರಕ್ಕಾಗಿ ಮೂರನೇ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಪ್ರವಾಸದ ಮೂರನೇ ಮತ್ತು ಅಂತಿಮ ಹಂತದಲ್ಲಿ, ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಅವರು ಮೇ 22 ರಿಂದ 24 ರವರೆಗೆ ಸಿಡ್ನಿಗೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಕೇದಾರನಾಥ ಧಾಮದಲ್ಲಿ 60 ಕ್ವಿಂಟಾಲ್ ತೂಕದ ಭವ್ಯವಾದ ಕಂಚಿನ 'ಓಂ' ಪ್ರತಿಮೆ ಸ್ಥಾಪನೆ

”ಶೃಂಗಸಭೆಯ ಸಮಯದಲ್ಲಿ, ಪ್ರಧಾನ ಮಂತ್ರಿಗಳು ಪಾಲುದಾರ ದೇಶಗಳೊಂದಿಗೆ ಜಿ-7 ಅಧಿವೇಶನಗಳಲ್ಲಿ ಮಾತನಾಡಲಿದ್ದಾರೆ. ಅದರಲ್ಲಿಯೂ ಸುಸ್ಥಿರ ಗ್ರಹದ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿ; ಆಹಾರ, ರಸಗೊಬ್ಬರ ಮತ್ತು ಇಂಧನ ಭದ್ರತೆ; ಆರೋಗ್ಯ; ಲಿಂಗ ಸಮಾನತೆ; ಹವಾಮಾನ ಬದಲಾವಣೆ ಮತ್ತು ಪರಿಸರ; ಚೇತರಿಸಿಕೊಳ್ಳುವ ಮೂಲಸೌಕರ್ಯ ; ಮತ್ತು ಅಭಿವೃದ್ಧಿ ಸಹಕಾರ ಕುರಿತಂತೆ ಚರ್ಚೆ ನಡೆಯಲಿದೆ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.ಪ್ರಧಾನಮಂತ್ರಿ ಅವರು ಆಸ್ಟ್ರೇಲಿಯಾದ ಸಿಇಒಗಳು ಮತ್ತು ವ್ಯಾಪಾರ ಮುಖಂಡರೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಮೇ ೨೩ ರಂದು ಸಿಡ್ನಿಯಲ್ಲಿ ಸಮುದಾಯ ಕಾರ್ಯಕ್ರಮದಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments