ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ ವಿಧಿವಶ

ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ ಅವರು ವಿಧಿವಶರಾಗಿದ್ದಾರೆಂದು ಗುರುವಾರ ತಿಳಿದುಬಂದಿದೆ.

ರತನ್ ಲಾಲ್ ಕಟಾರಿಯಾ
Manjula VN
Updated On : 18 May 2023, 9:23 am

ಚಂಡೀಗಢ: ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ ಅವರು ವಿಧಿವಶರಾಗಿದ್ದಾರೆಂದು ಗುರುವಾರ ತಿಳಿದುಬಂದಿದೆ.

ರತನ್ ಲಾಲ್ ಕಟಾರಿಯಾ ಅವರಿಗೆ 72 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ಕಟಾರಿಯಾ ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಕಟಾರಿಯಾ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕಟಾರಿಯಾ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ರಾಷ್ಟ್ರೀಯ ಸ್ವಯಂಸೇವಕದೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಪ್ರಧಾನಿ ಮೋದಿ ಅವರ ಸಂಪುಟದಲ್ಲಿ ಜಲಶಕ್ತಿ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾಗಿದ್ದ ಕಟಾರಿಯಾ ಅವರ,  ಎರಡು ವರ್ಷಗಳ ಕಾಲ ಸೇವೆಯ ಬಳಿಕ 2021 ರ ಜುಲೈನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Advertisement

Advertisement

ರತನ್​ ಲಾಲಾ ಕಟಾರಿಯಾ ಅವರ ನಿಧನಕ್ಕೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಸ್ಪೀಕರ್ ಜಿಯಾನ್ ಚಂದ್ ಗುಪ್ತಾ ಅವರು ಸಂತಾಪ ಸೂಚಿಸಿದ್ದು, ಪಂಚಕುಲದಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಕೇಂದ್ರದ ಮಾಜಿ ರಾಜ್ಯ ಸಚಿವ ಮತ್ತು ಅಂಬಾಲಾದ ಸಂಸದ ರತನ್ ಲಾಲ್ ಕಟಾರಿಯಾ ಅವರ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಅವರು ಸಮಾಜದ ಕಲ್ಯಾಣ ಮತ್ತು ಹರಿಯಾಣದ ಜನರ ಪ್ರಗತಿಗಾಗಿ ಸಂಸತ್ತಿನಲ್ಲಿ ಯಾವಾಗಲೂ ಧ್ವನಿ ಎತ್ತಿದವರು. ಅವರ ಅಗಲಿಕೆ ರಾಜಕೀಯಕ್ಕೆ ತುಂಬಲಾರದ ನಷ್ಟ. ದೇವರು ಅಗಲಿದ ಆತ್ಮಕ್ಕೆ ಸ್ಥಾನ ನೀಡಲಿ ಮತ್ತು ಈ ಕಷ್ಟದ ಸಮಯದಲ್ಲಿ ಕುಟುಂಬಕ್ಕೆ ಶಕ್ತಿಯನ್ನು ನೀಡಲಿ ಎಂದು ಮನೋಹರ್ ಲಾಲ್ ಖಟ್ಟರ್ ಅವರು ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments