ಮಾಯಾವತಿ 
ದೇಶ

2024ರಲ್ಲಿ ಉತ್ತರ ಪ್ರದೇಶದ ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಬಿಎಸ್‌ಪಿ ಸ್ಪರ್ಧಿಸಲಿದೆ: ಮಾಯಾವತಿ

ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವು ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಗುರುವಾರ ಇಲ್ಲಿ ಘೋಷಿಸಿದರು.

ಲಖನೌ: ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವು ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಗುರುವಾರ ಇಲ್ಲಿ ಘೋಷಿಸಿದರು.

ಬಿಎಸ್‌ಪಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಮತ್ತು ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸುತ್ತದೆ ಎಂದು ಅವರು ಪುನರುಚ್ಚರಿಸಿದರು.
ಚುನಾವಣೆಗೆ ತಯಾರಿ ಆರಂಭಿಸಲು ಮತ್ತು 'ವೋಟ್ ಹಮಾರಾ, ರಾಜ್ ತುಮ್ಹಾರಾ ನಹೀ ಚಲೇಗಾ' ಎಂಬ ಘೋಷಣೆಯನ್ನು ಆಕ್ರಮಣಕಾರಿಯಾಗಿ ಪ್ರಚಾರ ನಡೆಸುವಂತೆ ಅವರು ಪಕ್ಷದ ಮುಖಂಡರಿಗೆ ಸೂಚಿಸಿದರು.

ಇತ್ತೀಚಿನ ಮುನ್ಸಿಪಲ್ ಚುನಾವಣೆಗಳನ್ನು ಬಿಜೆಪಿ ನಿರ್ವಹಿಸುತ್ತಿದೆ ಮತ್ತು ತಿರುಚುತ್ತಿದೆ ಎಂದು ಆರೋಪಿಸಿದರು ಮತ್ತು ಜನರು ನಿಮ್ಮ ಗೇಮ್ ಪ್ಲಾನ್‌ ಅನ್ನು ನೋಡಿದ್ದಾರೆ ಮತ್ತು ಅವರು ಬಿಎಸ್‌ಪಿ ಮತ್ತೆ ಗೆಲುವು ಸಾಧಿಸಲು ನೆರವಾಗುತ್ತಾರೆ ಎಂದು ಹೇಳಿದರು.

ಇತರ ಪಕ್ಷಗಳಿಗೆ ಕಾರ್ಪೊರೇಟ್ ಸಂಸ್ಥೆಗಳು ಹಣ ನೀಡುತ್ತಿವೆ. ಆದರೆ, ಹಣಕಾಸಿನ ಬೆಂಬಲಕ್ಕಾಗಿ ತನ್ನ ಕಾರ್ಯಕರ್ತರನ್ನು ಅವಲಂಬಿಸಿರುವ ಏಕೈಕ ಪಕ್ಷ ಬಿಎಸ್‌ಪಿ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT