ದೇಶ

ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ತಮಿಳುನಾಡು ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್

Nagaraja AB

ನವದೆಹಲಿ: ಗೂಳಿ ಪಳಗಿಸುವ ಜಲ್ಲಿಕಟ್ಟು ಕ್ರೀಡೆಗೆ ಅವಕಾಶ ನೀಡುವ ತಮಿಳುನಾಡು ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.   'ಜಲ್ಲಿಕಟ್ಟು' ಮತ್ತು ಕಂಬಳ ಕ್ರೀಡೆಗೆ ಅವಕಾಶ ನೀಡುವ ತಮಿಳುನಾಡು ಮತ್ತು ಮಹಾರಾಷ್ಟ್ರ ಸರ್ಕಾರಗಳ ಕಾನೂನುಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ ಗುರುವಾರ ತನ್ನ ತೀರ್ಪು ಪ್ರಕಟಿಸಿದೆ.

 ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್, ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪಂಚ ನ್ಯಾಯಮೂರ್ತಿಗಳ ಸಂವಿಧಾನ ಪೀಠ ಈ ತೀರ್ಪು ಪ್ರಕಟಿಸಿದೆ. 

 'ಜಲ್ಲಿಕಟ್ಟು' ಕ್ರೀಡೆಯನ್ನು  ಸಮರ್ಥಿಸಿಕೊಂಡಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಾಗಿ ಈ ಕ್ರೀಡೆಯನ್ನು ಆಯೋಜಿಸಲಾಗುತ್ತದೆ.  'ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಗೂಳಿಗಳ ಮೇಲೆ ಯಾವುದೇ ಕ್ರೌರ್ಯ ನಡೆಸಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

SCROLL FOR NEXT