ದೇಶ

ಲೋಕಸಭೆ ಚುನಾವಣೆ: ಮಹಾರಾಷ್ಟ್ರದಲ್ಲಿ ಶೇ.51ರಷ್ಟು ಮತ ಪಡೆಯುವುದು ಬಿಜೆಪಿ ಗುರಿ

Lingaraj Badiger

ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಶೇ. 51ರಷ್ಟು ಮತಗಳನ್ನು ಗಳಿಸುವ ಗುರಿಯನ್ನು ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವಂಕುಲೆ ಅವರು ಹೇಳಿದ್ದಾರೆ.

ಗುರುವಾರ ಪುಣೆಯಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯ ನಂತರ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಬವಾಂಕುಲೆ, ಕಾರ್ಯಕಾರಣಿ ಸಭೆಯಲ್ಲಿ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಭಾಗವಹಿಸಿದ್ದರು. ಸಭೆಯಲ್ಲಿ ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು ಎಂದು ತಿಳಿಸಿದರು.

ಸಭೆಯಲ್ಲಿ, ಮಹಾರಾಷ್ಟ್ರದಲ್ಲಿ ಶೇ.51 ರಷ್ಟು ಮತಗಳನ್ನು ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡಲು ನಾವು ನಿರ್ಧರಿಸಿದ್ದೇವೆ. ಈ ಸಭೆಯ ನಂತರ ನಮ್ಮ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಮುಂಬರುವ ಲೋಕಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಯಾರಿ ನಡೆಸತ್ತೇವೆ. ರಾಜ್ಯದಲ್ಲಿ ಒಟ್ಟು 288 ವಿಧಾನಸಭಾ ಸ್ಥಾನಗಳಲ್ಲಿ 200 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವ ಗುರಿ ಹೊಂದಿದ್ದೇವೆ" ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಬಿಜೆಪಿ ಮತ್ತು ಶಿವಸೇನೆ ಎಲ್ಲಾ 48 ಲೋಕಸಭಾ ಸ್ಥಾನಗಳು ಮತ್ತು 288 ವಿಧಾನಸಭಾ ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿದೆ ಎಂದು ಅವರು ಹೇಳಿದರು.

"ನಮ್ಮ ಹೋರಾಟ ಕಾಂಗ್ರೆಸ್ ಎನ್‌ಸಿಪಿ ಮತ್ತು ಉದ್ಧವ್ ಠಾಕ್ರೆ ಗುಂಪಿನ ವಿರುದ್ಧವಾಗಿದೆ. ಮಹಾವಿಜಯ್ 2024 ಮಿಷನ್ ಅಡಿಯಲ್ಲಿ ನಾವು ರಾಜ್ಯದಲ್ಲಿ ಶೇಕಡಾ 51 ರಷ್ಟು ಮತ ಪಡೆಯುವ ಗುರಿ ಹೊಂದಿದ್ದೇವೆ. ನಾವು ಘರ್ ಚಲೋ ಸಂಪರ್ಕ ಅಭಿಯಾನದ ಮೂಲಕ ಮತದಾರರನ್ನು ತಲುಪುತ್ತೇವೆ" ಎಂದು ತಿಳಿಸಿದರು.

SCROLL FOR NEXT