ಪಿಣರಾಯಿ ವಿಜಯನ್ 
ದೇಶ

ಸಿದ್ದರಾಮಯ್ಯ ಪ್ರಮಾಣ ವಚನ ಸಮಾರಂಭ: ಕೇರಳ ಸಿಎಂಗಿಲ್ಲ ಆಹ್ವಾನ; ಎಲ್‌ಡಿಎಫ್ ಅಸಮಾಧಾನ

ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಈ ಸಮಾರಂಭಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಕಾಂಗ್ರೆಸ್ ಆಹ್ವಾನಿಸಿಲ್ಲ.

ನವದೆಹಲಿ: ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಈ ಸಮಾರಂಭಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಕಾಂಗ್ರೆಸ್ ಆಹ್ವಾನಿಸಿಲ್ಲ. ಕಾಂಗ್ರೆಸ್ ನ ಈ ಕ್ರಮ ಅಪಕ್ವ ರಾಜಕೀಯ ಮತ್ತು ದೌರ್ಬಲ್ಯವನ್ನು ತೋರಿಸುತ್ತದೆ ಎಂದು ಆಡಳಿತಾರೂಢ ಎಲ್‌ಡಿಎಫ್ ಶುಕ್ರವಾರ ಟೀಕಿಸಿದೆ.

ನೆರೆಯ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸೇರಿದಂತೆ ಇತರರಿಗೆ ಆಹ್ವಾನ ನೀಡಲಾಗಿದ್ದು, ಮೇ 20 ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಕೇರಳ ಸಿಎಂಗೆ ಆಹ್ವಾನ ನೀಡದಿರುವುದು ಬಿಜೆಪಿಯ "ಫ್ಯಾಸಿಸ್ಟ್" ರಾಜಕೀಯದ ವಿರುದ್ಧ ದೇಶದ ಜಾತ್ಯತೀತ ಪ್ರಜಾಸತ್ತಾತ್ಮಕ ಶಕ್ತಿಗಳನ್ನು ಒಗ್ಗೂಡಿಸುವ ಧ್ಯೇಯ ಸಾಧಿಸಲು ಸಾಧ್ಯವಿಲ್ಲ ಎಂದು ಎಲ್‌ಡಿಎಫ್ ಸಂಚಾಲಕ ಇ ಪಿ ಜಯರಾಜನ್ ಹೇಳಿದ್ದಾರೆ.

"ಕಾಂಗ್ರೆಸ್ ಈಗ ದೇಶದಲ್ಲಿ ಯಾವ ಬಿಜೆಪಿ ವಿರೋಧಿ ನಿಲುವು ಅನುಸರಿಸಲಿದೆ?" ಪ್ರಶ್ನಿಸಿದ ಜಯರಾಜನ್, ಈ ಕ್ರಮವು ವಿರೋಧ ಪಕ್ಷದ "ಅಪ್ರಬುದ್ಧ" ರಾಜಕೀಯ ಮತ್ತು ಅದರ ನಿರ್ದೇಶನ ಕೊರತೆಯ ಸೂಚನೆಯಾಗಿದೆ" ಎಂದು ಹೇಳಿದ್ದಾರೆ.

ರಾಷ್ಟ್ರ ರಾಜಕೀಯ ಮತ್ತು ದೇಶದ ಬೆಳವಣಿಗೆಗಳನ್ನು ಅವಲೋಕಿಸುವ ಮತ್ತು ಮೌಲ್ಯಮಾಪನ ಮಾಡುವಲ್ಲಿ ಕಾಂಗ್ರೆಸ್ ನಾಯಕತ್ವ ದುರ್ಬಲವಾಗಿದೆ ಎಂಬುದನ್ನು ಇದು ಸಾಬೀತುಪಡಿಸಿದೆ ಎಂದು ಮಾರ್ಕ್ಸ್‌ವಾದಿ ಪಕ್ಷದ ನಾಯಕ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!