ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿ ಅಮೆರಿಕ ಪ್ರವಾಸ ಮೇ 28 ಕ್ಕೆ ಮರು ನಿಗದಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇ 31 ರಂದು 10 ದಿನಗಳ ಕಾಲ ಅಮೆರಿಕ ಪ್ರವಾಸ ನಿಗದಿಯಾಗಿತ್ತು. ಆದರೆ, ಇದೀಗ ಮೇ 28 ರಂದೇ ಅವರು ಪ್ರಯಾಣಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇ 31 ರಂದು 10 ದಿನಗಳ ಕಾಲ ಅಮೆರಿಕ ಪ್ರವಾಸ ನಿಗದಿಯಾಗಿತ್ತು. ಆದರೆ, ಇದೀಗ ಮೇ 28 ರಂದೇ ಅವರು ಪ್ರಯಾಣಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ  ಮೇ 29-30 ರಂದು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದು, ಅನಿವಾಸಿ ಭಾರತೀಯರನ್ನು ಭೇಟಿಯಾಗಲಿದ್ದಾರೆ.

ರಾಹುಲ್ ಗಾಂಧಿ ಮಾರ್ಚ್ ನಲ್ಲಿ ಲಂಡನ್ ನಿಂದ ಹಿಂತಿರುಗಿದ ನಂತರ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಮಾಡಿದ್ದ ಭಾಷಣಕ್ಕಾಗಿ ಆಡಳಿತಾರೂಢ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದರು. ಭಾರತೀಯ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿ ಎದುರಿಸುತ್ತಿದ್ದೇವೆ ಎಂದು ಹೇಳಿದ್ದರು. ಅದಕ್ಕೆ ಅವರು ಕ್ಷಮೆಯಾಚಿಸುವಂತೆ ಬಿಜೆಪಿ ನಾಯಕರು ಒತ್ತಾಯಿಸಿದ್ದರು. 

ಜೂನ್ 4 ರಂದು ರಾಹುಲ್ ಗಾಂಧಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರ್‍ಯಾಲಿ ನಡೆಸಲಿದ್ದಾರೆ. ಇದರಲ್ಲಿ ಸುಮಾರು 5,000 ಅನಿವಾಸಿ ಭಾರತೀಯರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT