ದೇಶ

ಶಿಕ್ಷಕರ ನೇಮಕಾತಿ ಹಗರಣ: ಅಭಿಷೇಕ್ ಬ್ಯಾನರ್ಜಿಯನ್ನು 9 ಗಂಟೆಗಳ ಕಾಲ ವಿಚಾರಣೆ ನಡೆಸಿದ ಸಿಬಿಐ

Lingaraj Badiger

ಕೋಲ್ಕತ್ತಾ: ಶಾಲಾ ಶಿಕ್ಷಕರ ನೇಮಕಾತಿ ಹಗರಣದ ತನಿಖೆಯ ಭಾಗವಾಗಿ ಶನಿವಾರ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರನ್ನು ಸಿಬಿಐ ಅಧಿಕಾರಿಗಳು 9 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ಬಳಿಕ ಸಿಬಿಐ ಕಚೇರಿಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, ಈ ವಿಚಾರಣೆಯು ತನಗೆ ಮತ್ತು ಸಿಬಿಐ ಅಧಿಕಾರಿಗಳಿಗೆ ಸಮಯ ವ್ಯರ್ಥ, ಆದರೆ ಅವರು "ಕೇಳಿದ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ" ಎಂದು ಹೇಳಿದರು.

"ನನ್ನನ್ನು ಸಿಬಿಐ ಒಂಬತ್ತುವರೆ ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತು. ಈ ವಿಚಾರಣೆ ಅವರಿಗೆ(ಸಿಬಿಐ ಅಧಿಕಾರಿಗಳು) ಮತ್ತು ನನಗೆ ಸಮಯ ವ್ಯರ್ಥವಾಯಿತು" ಎಂದು ಸಿಬಿಐ ಕಚೇರಿಯಿಂದ ಹೊರಬಂದ ನಂತರ ಬ್ಯಾನರ್ಜಿ ಹೇಳಿದ್ದಾರೆ.

"ದೆಹಲಿಯ ಮೇಲಧಿಕಾರಿಗಳ ಸೂಚನೆಯಂತೆ ನನ್ನನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಅನಗತ್ಯವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ" ಎಂದು ಟಿಎಂಸಿ ನಾಯಕ ಆರೋಪಿಸಿದ್ದಾರೆ.

SCROLL FOR NEXT