ದೇಶ

1984 ರ ಗಲಭೆ ಪ್ರಕರಣ: ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಕೆ

Nagaraja AB

ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಕೇಂದ್ರೀಯ ತನಿಖಾ ದಳ- ಸಿಬಿಐ ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್ 1, 1984 ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯಾದ ಒಂದು ದಿನದ ನಂತರ ಪುಲ್ ಬಂಗಾಶ್ ಪ್ರದೇಶದಲ್ಲಿ ಮೂವರನ್ನು ಹತ್ಯೆ ಮಾಡಲಾಗಿತ್ತು ಹಾಗೂ ಗುರುದ್ವಾರಕ್ಕೆ ಬೆಂಕಿ ಹಚ್ಚಲಾಗಿತ್ತು. 

1984 ರ ನವೆಂಬರ್ 1 ರಂದು ಪುಲ್ ಬಂಗಾಶ್ ಗುರುದ್ವಾರ ಆಜಾದ್ ಮಾರ್ಕೆಟ್‌ನಲ್ಲಿ ನೆರೆದಿದ್ದ ಜನಸಮೂಹವನ್ನು ಟೈಟ್ಲರ್ ಪ್ರಚೋದಿಸಿದ್ದರು. ಇದರ ಪರಿಣಾಮವಾಗಿ ಗುರುದ್ವಾರಕ್ಕೆ ಬೆಂಕಿ ಹಚ್ಚಿ ಮೂವರು ಸಿಖ್ಖರನ್ನು ಕೊಂದು ಹಾಕಲಾಗಿತ್ತು.  ಎಂದು ಸಿಬಿಐ ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ತನ್ನ ಚಾರ್ಜ್ ಶೀಟ್‌ನಲ್ಲಿ ಹೇಳಿದೆ.

ಟೈಟ್ಲರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ)  147 (ಗಲಭೆ), 109 (ಪ್ರಚೋದನೆ) ಅಡಿಯಲ್ಲಿ ಆರೋಪಗಳನ್ನು ಹೊರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಯಾಲಯವು ಜೂನ್ 2 ರಂದು ಆರೋಪಗಳನ್ನು ಪರಿಗಣಿಸಲಿದೆ ಎಂದು ಅವರು ಹೇಳಿದರು. 

SCROLL FOR NEXT