ಎಂ.ಕೆ. ಸ್ಟಾಲಿನ್ 
ದೇಶ

ಕರ್ನಾಟಕ ಚುನಾವಣೆಯಲ್ಲಿನ ಸೋಲನ್ನು ಮುಚ್ಚಿಕೊಳ್ಳಲು 2000 ರೂ. ನೋಟನ್ನು ಹಿಂಪಡೆಯಲಾಗಿದೆ: ಎಂಕೆ ಸ್ಟಾಲಿನ್

2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಕೇಂದ್ರ ಸರ್ಕಾರದ ಕ್ರಮವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡ ಸೋಲನ್ನು ಮುಚ್ಚಿಹಾಕುವ ಲೆಕ್ಕಾಚಾರದ ಕ್ರಮವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಹೇಳಿದ್ದಾರೆ.

ಚೆನ್ನೈ: 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಕೇಂದ್ರ ಸರ್ಕಾರದ ಕ್ರಮವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡ ಸೋಲನ್ನು ಮುಚ್ಚಿಹಾಕುವ ಲೆಕ್ಕಾಚಾರದ ಕ್ರಮವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಹೇಳಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಟ್ವೀಟ್‌ ಮಾಡಿದ್ದು, '500 ಅನುಮಾನಗಳು, 1,000 ನಿಗೂಢಗಳು ಮತ್ತು 2,000 ಪ್ರಮಾದಗಳು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿನ ದಯನೀಯ ವೈಫಲ್ಯವನ್ನು ಮುಚ್ಚಿಹಾಕಲು ಇದೊಂದು ತಂತ್ರ' ಎಂದಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ನಂತರ ಸ್ಟಾಲಿನ್, ಬಿಜೆಪಿಯನ್ನು ದ್ರಾವಿಡ ಭೂದೃಶ್ಯದಿಂದ ನಿರ್ನಾಮ ಮಾಡಲಾಗಿದೆ ಎಂದು ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ನೋಟು ಅಮಾನ್ಯೀಕರಣದ ಪ್ರಯತ್ನ ಇದಾಗಿದೆ ಎಂದು ಅವರು ಹೇಳಿದರು.

ಇದಕ್ಕೂ ಒಂದು ದಿನ ಮೊದಲು ಸಂಸದೆ ಮತ್ತು ಡಿಎಂಕೆ ಉಪ ಕಾರ್ಯದರ್ಶಿ ಕನಿಮೊಳಿ ಅವರು 2,000 ರೂಪಾಯಿ ನೋಟಿನ ಫೊಟೋವನ್ನು ಪೋಸ್ಟ್ ಮಾಡಿ, 'ಆತನೇ ಸೃಷ್ಟಿಸುವವನು, ಆತನೇ ನಾಶಪಡಿಸುವವನು' ಎಂದು ಟ್ವೀಟ್ ಮಾಡಿದ್ದರು.

ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ 2,000 ರೂಪಾಯಿ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು ಮತ್ತು ಅಸ್ತಿತ್ವದಲ್ಲಿರುವ ನೋಟುಗಳನ್ನು ಸೆಪ್ಟೆಂಬರ್ 30 ರವರೆಗೆ ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಇತರ ಕರೆನ್ಸಿ ನೋಟುಗಳಿಗೆ ವಿನಿಮಯ ಮಾಡಿಕೊಳ್ಳಬಹುದು ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT