ದೇಶ

ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಜನರಿಗಾಗಿ ಕೆಲಸ ಮಾಡುತ್ತದೆ: ಸಚಿನ್ ಪೈಲಟ್

Ramyashree GN

ಜೈಪುರ: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ ಪಕ್ಷದ ನಾಯಕ ಸಚಿನ್ ಪೈಲಟ್ ಭಾನುವಾರ, ಪಕ್ಷವು ಜನರಿಗಾಗಿ ಕೆಲಸ ಮಾಡುತ್ತದೆ ಮತ್ತು ನಿರೀಕ್ಷೆಗಳನ್ನು ಈಡೇರಿಸುತ್ತದೆ ಎಂದು ಹೇಳಿದ್ದಾರೆ.

ಉತ್ತಮ ಬಹುಮತದೊಂದಿಗೆ ಕರ್ನಾಟಕದಲ್ಲಿ ಸರ್ಕಾರ ರಚಿಸಿದ್ದೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರಚಾರ ಮಾಡುವಾಗ, ಬಿಜೆಪಿ ಭ್ರಷ್ಟ ಪಕ್ಷ ಎಂದು ಹೇಳಿತು ಮತ್ತು ಜನರು ಅದನ್ನು ಒಪ್ಪಿಕೊಂಡರು. ಪರಿಣಾಮವಾಗಿ ನಾವು ರಾಜ್ಯದಲ್ಲಿ ಸರ್ಕಾರವನ್ನು ರಚಿಸಿದ್ದೇವೆ ಎಂದು ಪೈಲಟ್ ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದರು.

'ನಾವು ಜನರಿಗಾಗಿ ಕೆಲಸ ಮಾಡುತ್ತೇವೆ ಮತ್ತು ಸಾರ್ವಜನಿಕ ನಿರೀಕ್ಷೆಗಳಿಗೆ ತಕ್ಕಂತೆ ಬದುಕುತ್ತೇವೆ ಎಂದು ನಾನು ನಂಬುತ್ತೇನೆ' ಎಂದು ಅವರು ಹೇಳಿದರು.

ಶನಿವಾರ ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು ಮತ್ತು ಡಿಕೆ ಶಿವಕುಮಾರ್ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

2000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರದ ಬಗ್ಗೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಪೈಲಟ್, 'ಮೊದಲು ಅವರು 1,000 ಮತ್ತು 500 ರೂಪಾಯಿ ನೋಟುಗಳನ್ನು ರದ್ದುಗೊಳಿಸಿದರು. ನಂತರ 2,000 ರೂಪಾಯಿಗಳನ್ನು ತಂದರು. ಈಗ ಕೇಂದ್ರ ಸರ್ಕಾರವು 2,000 ರೂ. ನೋಟುಗಳನ್ನು ಚಲಾವಣೆಯನ್ನು ಹಿಂತೆಗೆದುಕೊಳ್ಳುತ್ತಿದೆ' ಎಂದರು.

2016ರಲ್ಲಿ ನೋಟು ಅಮಾನ್ಯೀಕರಣದ ನಂತರ ಬಿಜೆಪಿ ನೇತೃತ್ವದ ಸರ್ಕಾರವು ನೋಟು ಅಮಾನ್ಯೀಕರಣವು ಕಪ್ಪುಹಣವನ್ನು ತೊಡೆದುಹಾಕುತ್ತದೆ ಎಂದು ಹೇಳಿಕೊಂಡಿದ್ದರೂ, ಕಪ್ಪುಹಣವನ್ನು ನಿರ್ಮೂಲನೆ ಮಾಡಲಾಗಿಲ್ಲ ಎಂದು ದೂರಿದರು. 

ಶುಕ್ರವಾರ, ಆರ್‌ಬಿಐ ರೂ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಿದೆ. ತಕ್ಷಣವೇ ಜಾರಿಗೆ ಬರುವಂತೆ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಬ್ಯಾಂಕ್‌ಗಳಿಗೆ ಸೂಚಿಸಿದೆ.

SCROLL FOR NEXT