ದೇಶ

ಕರ್ನಾಟಕದಂತೆ ಮಹಾರಾಷ್ಟ್ರದಲ್ಲೂ ಬಿಜೆಪಿಯನ್ನು ತಿರಸ್ಕರಿಸಿ: ಶರದ್ ಪವಾರ್

Lingaraj Badiger

ಮುಂಬೈ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಏಕನಾಥ್ ಶಿಂಧೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಅಧ್ಯಕ್ಷ ಶರದ್ ಪವಾರ್, ಕೋಮು ವಿಭಜನೆಯನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸುವ ಶಕ್ತಿಗಳ ವಿರುದ್ಧ ಹೋರಾಡಬೇಕಾಗಿದೆ ಎಂದು ಹೇಳಿದ್ದಾರೆ.

“ಕೆಲವರು ಉದ್ದೇಶಪೂರ್ವಕವಾಗಿ ಸಮಾಜವನ್ನು ಧಾರ್ಮಿಕ ನೆಲೆಯಲ್ಲಿ ಒಡೆಯುತ್ತಿದ್ದಾರೆ. ಎರಡು ಸಮುದಾಯಗಳ ನಡುವೆ ಬಿರುಕು ಮೂಡಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಿದರೆ ಜನರ ಬದುಕು ಅತಂತ್ರವಾಗಲಿದೆ ಎಂದು ಪವಾರ್ ಎಚ್ಚಿಸಿದ್ದಾರೆ.

ಕರ್ನಾಟಕದಲ್ಲೂ ಬಿಜೆಪಿ ಅದೇ ಅಜೆಂಡಾವನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿತು. ಆದರೆ ಮತದಾರರು ಬಿಜೆಪಿಯನ್ನು ತಿರಸ್ಕರಿಸಿದರು. ಕರ್ನಾಟಕದಂತೆ ಮಹಾರಾಷ್ಟ್ರದಲ್ಲೂ ಬಿಜೆಪಿಯನ್ನು ತಿರಸ್ಕರಿಸಿ ಎಂದು ಶರದ್ ಪವಾರ್ ಮನವಿ ಮಾಡಿದ್ದಾರೆ.

ಬಿಜೆಪಿ ಜನರ ನಡುವೆ ದ್ವೇಷ ಹರಡಲು ಯತ್ನಿಸಿ, ವಿಫಲವಾಗಿದೆ ಎಂದು ಶರದ್ ಪವಾರ್ ಹೇಳಿದ್ದಾರೆ.

ಬದಲಾವಣೆ ಅನಿವಾರ್ಯ. ಕರ್ನಾಟಕದಲ್ಲಿ ಈಗ ಬದಲಾವಣೆ ಆಗಿದೆ. ಈಗ ಮಹಾರಾಷ್ಟ್ರದಲ್ಲಿ ಮತ್ತು ಮುಂದಿನ ವರ್ಷ ಲೋಕಸಭೆ ಚುನಾವಣೆಯಲ್ಲೂ ಬದಲಾವಣೆ ಆಗಬಹುದು. ಜನ ಶಾಂತಿ ಮತ್ತು ಸೌಹಾರ್ದತೆಯನ್ನು ಬಯಸುತ್ತಾರೆ. ಸಮುದಾಯಗಳ ನಡುವಿನ ಸಂಘರ್ಷವಲ್ಲ. ಬದಲಾವಣೆ ತರುವುದು ಜನರ ಜವಾಬ್ದಾರಿ ಎಂದು ಪವಾರ್ ಹೇಳಿದ್ದಾರೆ.

SCROLL FOR NEXT