ಹಲವು ಮನೆಗಳಿಗೆ ಬೆಂಕಿ 
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಇಂಫಾಲ್‌ನಲ್ಲಿ ಸೇನೆ ನಿಯೋಜನೆ

ಮಣಿಪುರದಲ್ಲಿ ಸೋಮವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಜನ ಈಗಾಗಲೇ ಈ ಮನೆಗಳನ್ನು ಖಾಲಿ ಮಾಡಿದ್ದರಿಂದ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಗುವಾಹಟಿ: ಮಣಿಪುರದಲ್ಲಿ ಸೋಮವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಜನ ಈಗಾಗಲೇ ಈ ಮನೆಗಳನ್ನು ಖಾಲಿ ಮಾಡಿದ್ದರಿಂದ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಆದರೆ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ಬೆಳಗ್ಗೆ 10 ಗಂಟೆಯ ಸುಮಾರಿಗೆ ಇಬ್ಬರು ವ್ಯಕ್ತಿಗಳು, ಒಬ್ಬರು ಸಿಂಗಲ್ ಬ್ಯಾರೆಲ್ ಗನ್‌ ಹೊಂದಿದ್ದರು ಎಂದು ಹೇಳಲಾಗಿದ್ದು, ಇಂಫಾಲ್‌ನ ನ್ಯೂ ಚೆಕ್‌ಕಾನ್ ಪ್ರದೇಶದಲ್ಲಿ ರಸ್ತೆ ಬದಿಯ ವ್ಯಾಪಾರಿಗಳಿಗೆ, ಹೆಚ್ಚಾಗಿ ಮಹಿಳೆಯರಿಗೆ ಅಂಗಡಿಗಳನ್ನು ಮುಚ್ಚುವಂತೆ ಬೆದರಿಕೆ ಹಾಕಿದರು. ಇದು ಜನರನ್ನು ಕೆರಳಿಸಿತು.

ಸುದ್ದಿ ಹರಡುತ್ತಿದ್ದಂತೆ, ಗುಂಪೊಂದು ಸ್ಥಳಕ್ಕೆ ಆಗಮಿಸಿ ಕೆಲವು ಖಾಲಿ ಮಾಡಿದ ಮನೆಗಳಿಗೆ ಬೆಂಕಿ ಹಚ್ಚಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಸೇನೆ ಮತ್ತು ಅರೆಸೇನಾ ಪಡೆ ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಮನೆಗಳಿಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಸಮೀಪದ ಪ್ರದೇಶದಲ್ಲಿ ವಾಸವಿರುವ ಇಬ್ಬರು ಹಾಗೂ ಮಾಜಿ ಶಾಸಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರೂ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದರು ಎನ್ನಲಾಗಿದೆ.

ಸಹಜ ಸ್ಥಿತಿಗೆ ಮರಳಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಜನರು ಸಹಕರಿಸಬೇಕು ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್