ಮಲ್ಲಿಕಾರ್ಜುನ ಖರ್ಗೆ 
ದೇಶ

ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗಳಿಗೇ ಆಮಂತ್ರಣವಿಲ್ಲ.. ಮೋದಿ ಸರ್ಕಾರದಿಂದ ಅಪಮಾನ: ಮಲ್ಲಿಕಾರ್ಜುನ ಖರ್ಗೆ ಕಿಡಿ

ನೂತನ ಸಂಸತ್ತ್ ಭವನ ಕಟ್ಟಡ ಉದ್ಘಾಟನೆಗೆ ರಾಷ್ಟ್ರಪತಿಗಳಿಗೆ ಆಹ್ವಾನ ನೀಡದೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗೌರವ ತೋರಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ನೂತನ ಸಂಸತ್ತ್ ಭವನ ಕಟ್ಟಡ ಉದ್ಘಾಟನೆಗೆ ರಾಷ್ಟ್ರಪತಿಗಳಿಗೆ ಆಹ್ವಾನ ನೀಡದೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗೌರವ ತೋರಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಸರ್ಕಾರದ ಆಡಳಿತದಲ್ಲಿ ಔಚಿತ್ಯವನ್ನು ಟೋಕನಿಸಂಗೆ ಇಳಿಸಲಾಗಿದೆ ಎಂದು ಕಿಡಿಕಾರಿದ ಅವರು, ಮೋದಿ ಸರ್ಕಾರವು ಕೇವಲ ಚುನಾವಣಾ ಕಾರಣಗಳಿಗಾಗಿ ದಲಿತ ಮತ್ತು ಬುಡಕಟ್ಟು ಸಮುದಾಯಗಳಿಂದ ಭಾರತದ ರಾಷ್ಟ್ರಪತಿಗಳ ಆಯ್ಕೆಯನ್ನು ಮಾಡಿದಂತೆ ತೋರುತ್ತಿದೆ. ಬಿಜೆಪಿ-ಆರ್‌ಎಸ್‌ಎಸ್ ಸರ್ಕಾರದ ಅಡಿಯಲ್ಲಿ ಭಾರತದ ರಾಷ್ಟ್ರಪತಿಗಳ ಔಚಿತ್ಯವನ್ನು ಪದೇ ಪದೇ ಟೋಕನಿಸಂಗೆ ಇಳಿಸುವ ಮೂಲಕ ಅಗೌರವ ನೀಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರು, 'ದೇಶದ ಪ್ರಥಮ ಪ್ರಜೆಯೂ ಆಗಿರುವ ರಾಷ್ಟ್ರಪತಿಗಳು ಭಾರತದ ಅತ್ಯುನ್ನತ ಶಾಸಕಾಂಗದ ಅತ್ಯುನ್ನತ ಸಾಂವಿಧಾನಿಕ ಪ್ರಾಧಿಕಾರವಾಗಿರುವುದರಿಂದ, ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಸಾಂವಿಧಾನಿಕ ಔಚಿತ್ಯಕ್ಕೆ ಸರ್ಕಾರದ ಬದ್ಧತೆಯನ್ನು ಸಂಕೇತಿಸುವ ಹೊಸ ಕಟ್ಟಡವನ್ನು ಅವರು ಉದ್ಘಾಟಿಸಬೇಕು. ಮಾಜಿ ರಾಷ್ಟ್ರಪತಿಯಾಗಿದ್ದ ರಾಮನಾಥ್‌ ಕೋವಿಂಡ್‌ ಅವರನ್ನು ಹೊಸ ಸಂಸತ್‌ ಭವನದ ಶಿಲಾನ್ಯಾಸ ಕಾರ್ಯಕ್ರಮಕ್ಕೂ ಆಹ್ವಾನ ನೀಡಲಾಗಿರಲಿಲ್ಲ. ಈಗ ಭಾರತದ ರಾಷ್ಟ್ರಪತಿಯಾಗಿರುವ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಹೊಸ ಸಂಸತ್‌ ಭವನದ ಉದ್ಘಾಟನೆಗೆ ಆಹ್ವಾನ ನೀಡಲಾಗಿಲ್ಲ ಎಂದು ಖರ್ಗೆ ಬರೆದಿದ್ದಾರೆ.

"ಭಾರತದ ಸಂಸತ್ತು ಭಾರತ ಗಣರಾಜ್ಯದ ಸರ್ವೋಚ್ಚ ಶಾಸಕಾಂಗ ಸಂಸ್ಥೆಯಾಗಿದೆ ಮತ್ತು ಭಾರತದ ರಾಷ್ಟ್ರಪತಿಗಳು ಅದರ ಅತ್ಯುನ್ನತ ಸಾಂವಿಧಾನಿಕ ಅಧಿಕಾರವಾಗಿದೆ. ಅವರು ಮಾತ್ರವೇ ಸರ್ಕಾರ, ವಿರೋಧ ಪಕ್ಷ ಹಾಗೂ ಪ್ರತಿ ನಾಗರೀಕರನ್ನು ಪ್ರತಿನಿಧಿಸುತ್ತಾರೆ. ಅವರು ಭಾರತದ ಪ್ರಥಮ ಪ್ರಜೆ. ಅವರು ನೂತನ ಸಂಸತ್ ಭವನದ ಉದ್ಘಾಟನೆಯು ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಸಾಂವಿಧಾನಿಕ ಔಚಿತ್ಯಕ್ಕೆ ಸರ್ಕಾರದ ಬದ್ಧತೆಯನ್ನು ಸಂಕೇತಿಸುತ್ತದೆ ಎಂದು ಖರ್ಗೆ ಹೇಳಿದರು.

ಇನ್ನು ಸಂಸತ್ ಭವನ ಉದ್ಘಾಟನೆ ವಿಚಾರವಾಗಿ ಲೋಕಸಭೆಯ ಸಚಿವಾಲಯ ಮಾಹಿತಿ ನೀಡಿದ್ದು, 'ವೀರ್‌ ಸಾವರ್ಕರ್ ಅವರ ಜನ್ಮದಿನವಾದ ಮೇ 28 ರಂದು 64,500 ಚದರ ಮೀಟರ್ ವಿಸ್ತೀರ್ಣದ ತ್ರಿಕೋನ ಆಕಾರದ ನಾಲ್ಕು ಅಂತಸ್ತಿನ ಕಟ್ಟಡವನ್ನು ಪ್ರಧಾನಿ ಮೋದಿ ದೇಶಕ್ಕೆ ಸಮರ್ಪಿಸಲಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಅವರು ಕಳೆದ ವಾರ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಿದ್ದರು ಎಂದು ತಿಳಿಸಿದೆ.

ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳ ಕಿಡಿ
ಇನ್ನು ಕಾಂಗ್ರೆಸ್‌ನ ರಾಹುಲ್ ಗಾಂಧಿ, ಎಐಎಂಐಎಂನ ಅಸಾದುದ್ದೀನ್ ಓವೈಸಿ, ತೃಣಮೂಲ ಕಾಂಗ್ರೆಸ್‌ನ ಸುಖೇಂದು ಶೇಖರ್ ರೇ, ಸಿಪಿಐನ ಡಿ ರಾಜಾ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರು, ಪ್ರಧಾನಿ ಮೋದಿ ಅವರು ಸರ್ಕಾರದ ಮುಖ್ಯಸ್ಥರೇ ಹೊರತು ಶಾಸಕಾಂಗದ ಮುಖ್ಯಸ್ಥರಲ್ಲ ಎಂದು ಉಲ್ಲೇಖಿಸಿ ಪ್ರಧಾನಿ ಮೋದಿ ಸಂಕೀರ್ಣವನ್ನು ಉದ್ಘಾಟಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT