ದೇಶ

ಪ್ರಣಯ್ ರಾಯ್, ರಾಧಿಕಾ ರಾಯ್ ವಿದೇಶ ಪ್ರಯಾಣಕ್ಕೆ ದೆಹಲಿ ಹೈಕೋರ್ಟ್ ಅನುಮತಿ

Lingaraj Badiger

ನವದೆಹಲಿ: ಎನ್‌ಡಿಟಿವಿ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ಅವರಿಗೆ ವ್ಯಾಪಾರ ಉದ್ದೇಶ ಮತ್ತು ವೈಯಕ್ತಿಕ ಕಾರಣಗಳಿಗಾಗಿ ಮೂರು ವಾರಗಳ ಕಾಲ ವಿದೇಶ ಪ್ರವಾಸಕ್ಕೆ ತೆರಳಲು ದೆಹಲಿ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.

ಅರ್ಜಿದಾರರ ವೃತ್ತಿಪರ ನಿಲುವಿನಿಂದಾಗಿ, ಅವರು ದೇಶ ತೊರೆಯುವ ಅಪಾಯ ಇಲ್ಲ ಮತ್ತು ಜುಲೈ 25 ರಿಂದ ಆಗಸ್ಟ್ 15 ರವರೆಗೆ ವಿದೇಶ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ ಎಂದು ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಅವರು ಹೇಳಿದ್ದಾರೆ.

ನ್ಯಾಯಾಲಯವು ರಿಜಿಸ್ಟ್ರಾರ್ ಮುಂದೆ ವಿಧಿಸಿದ ಅಗತ್ಯ ಷರತ್ತುಗಳನ್ನು ಪೂರೈಸಿದ ನಂತರ ರಾಯ್ ದಂಪತಿಗೆ ಯುನೈಟೆಡ್ ಕಿಂಗ್‌ಡಮ್‌ಗೆ ಭೇಟಿ ನೀಡಲು ಹೈಕೋರ್ಟ್ ಅನುಮತಿ ನೀಡಿದೆ.

ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರು ತಮ್ಮ ಪ್ರಯಾಣದ ವಿವರಗಳನ್ನು ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ನೀಡುವಂತೆಯೂ ಕೋರ್ಟ್ ಸೂಚಿಸಿದೆ.

ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ರಾಯ್ ದಂಪತಿ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿರುವ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಆದೇಶದ ಮೇರೆಗೆ ತಮ್ಮ ವಿರುದ್ಧ ಹೊರಡಿಸಲಾಗಿರುವ ಲುಕ್‌ಔಟ್ ನೋಟಿಸ್ ಅನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

SCROLL FOR NEXT