ದೇಶ

ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸಲು ಟಿಎಂಸಿ ನಿರ್ಧಾರ

Lingaraj Badiger

ಕೋಲ್ಕತ್ತಾ: ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ನೂತನ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ತೃಣಮೂಲ ಕಾಂಗ್ರೆಸ್ ಮಂಗಳವಾರ ಹೇಳಿದೆ.

ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮವನ್ನು ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ದಿನ ಅಥವಾ ಗಾಂಧಿ ಜಯಂತಿಯಂದು ನಡೆಸಬೇಕೇ ಹೊರತು ವಿಡಿ ಸಾವರ್ಕರ್ ಅವರ ಜನ್ಮದಿನದಂದು ಅಲ್ಲ ಎಂದು ಲೋಕಸಭೆಯ ಟಿಎಂಸಿ ನಾಯಕ ಸುದೀಪ್ ಬಂಡೋಪಾಧ್ಯಾಯ ಅವರು ಹೇಳಿದ್ದಾರೆ.

ಟಿಎಂಸಿ ತನ್ನ ಕಳವಳವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಿದೆಯೇ ಎಂಬ ಪ್ರಶ್ನೆಗೆ, ಬಂಡೋಪಾಧ್ಯಾಯ ಅವರು ಸಕಾರಾತ್ಮಕವಾಗಿ ಉತ್ತರಿಸಿದ್ದಾರೆ.

ಹಳೆ ಸಂಸತ್ ಭವನವನ್ನು ಏನು ಮಾಡಲಾಗುತ್ತಿದೆ ಎಂಬ ವಿಚಾರದ ಬಗ್ಗೆ ವಿರೋಧ ಪಕ್ಷಗಳಿಗೆ ಯಾವುದೇ ಮಾಹಿತಿ ನೀಡಿಲ್ಲ. ಸರ್ಕಾರ ಈ ಬಗ್ಗೆ ಮೌನ ವಹಿಸುತ್ತಿದೆ ಎಂದು ಟಿಎಂಸಿ ನಾಯಕ ಆರೋಪಿಸಿದ್ದಾರೆ.

ಸಂಸತ್ತು ಕೇವಲ ಕಟ್ಟಡವಲ್ಲ, ಹಳೆಯ ಸಂಪ್ರದಾಯಗಳು, ಮೌಲ್ಯಗಳು, ಪೂರ್ವನಿದರ್ಶನಗಳು ಮತ್ತು ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯದ ಮೇಲೆ ಸ್ಥಾಪನೆಯಾಗಿದೆ ಎಂದು ರಾಜ್ಯಸಭೆಯ ಟಿಎಂಸಿ ನಾಯಕ ಡೆರೆಕ್ ಒ'ಬ್ರೇನ್ ಅವರು ಹೇಳಿದ್ದಾರೆ.

"ಸಂಸತ್ತು ಕೇವಲ ಹೊಸ ಕಟ್ಟಡವಲ್ಲ; ಇದು ಹಳೆಯ ಸಂಪ್ರದಾಯಗಳು, ಮೌಲ್ಯಗಳು, ಪೂರ್ವನಿದರ್ಶನಗಳು ಮತ್ತು ನಿಯಮಗಳೊಂದಿಗೆ ಸ್ಥಾಪನೆಯಾಗಿದೆ - ಇದು ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಪ್ರಧಾನಿ ಮೋದಿ ಅವರಿಗೆ ಅದು ಅರ್ಥವಾಗುವುದಿಲ್ಲ. ಅವರಿಗೆ, ಭಾನುವಾರದ ಹೊಸ ಕಟ್ಟಡದ ಉದ್ಘಾಟನೆ ನಾನು, ನನ್ನ, ನನ್ನ ಬಗ್ಗೆ ಅಷ್ಟೆ. ಆದ್ದರಿಂದ ನಾವು ಹೊರಗುಳಿಯುತ್ತೇವೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

SCROLL FOR NEXT