ದೇಶ

2000 ರೂ. ನೋಟು ಚಲಾವಣೆಯಿಂದ ಹಿಂದಕ್ಕೆ: ಪ್ರಧಾನಿ ಮೋದಿಯನ್ನು 'ಪಗ್ಲಾ' ಎಂದ ಕಾಂಗ್ರೆಸ್ ಸಂಸದ

Ramyashree GN

ಮುರ್ಶಿದಾಬಾದ್: 2000 ರೂ. ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿರುವ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬುಧವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 'ಮತ್ತೆ ಅವರು (ಪಿಎಂ ಮೋದಿ) 2,000 ರೂಪಾಯಿ ನೋಟುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದಾರೆ. ಅವರು ಮೋದಿ ಅಲ್ಲ, ಅವರು 'ಪಗ್ಲಾ (ಹುಚ್ಚ) ಮೋದಿ'. ಜನರು ಅವರನ್ನು 'ಪಗ್ಲಾ ಮೋದಿ' ಎಂದು ಕರೆಯುತ್ತಿದ್ದಾರೆ. ದೇಶದ ಆರ್ಥಿಕತೆಯು ಈಗಾಗಲೇ ಕ್ಷೀಣಿಸುತ್ತಿದೆ ಮತ್ತು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಲು ಅವರು ಈ ಕ್ರಮವನ್ನು ತೆಗೆದುಕೊಂಡಿದ್ದಾರೆ. ಈಗ, 2000 ರೂ. ನೋಟುಗಳು ಮಾರುಕಟ್ಟೆಯಲ್ಲಿ ಚಲಾವಣೆಯಾಗುವುದಿಲ್ಲ' ಎಂದಿದ್ದಾರೆ.

'ಈ ಸರ್ಕಾರದಿಂದ ಜನತೆ ಸಂಪೂರ್ಣ ಹತಾಶರಾಗಿದ್ದಾರೆ. ಈಗ, ಜನರು ಧ್ವನಿ ಎತ್ತುತ್ತಿದ್ದಾರೆ. ಅವರ (ಬಿಜೆಪಿ) ವಿರುದ್ಧ ಹೋರಾಡಲು ಎಲ್ಲರೂ (ರಾಜಕೀಯ ಪಕ್ಷಗಳು) ಕಾಂಗ್ರೆಸ್ ನಾಯಕತ್ವದಲ್ಲಿ ಒಗ್ಗೂಡಬೇಕು ಎಂದು ಅವರು ಹೇಳುತ್ತಿದ್ದಾರೆ' ಎಂದು ಅವರು ಹೇಳಿದರು.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶುಕ್ರವಾರ 2,000 ರೂಪಾಯಿ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಿದೆ. ತಕ್ಷಣವೇ ಜಾರಿಗೆ ಬರುವಂತೆ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಗ್ರಾಹಕರಿಗೆ ನೀಡುವುದನ್ನು ನಿಲ್ಲಿಸುವಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚಿಸಿತ್ತು.

ಆದಾಗ್ಯೂ, ನಾಗರಿಕರು ರೂ. 2000 ನೋಟುಗಳನ್ನು ತಮ್ಮ ಬ್ಯಾಂಕ್ ಖಾತೆಗಳಿಗೆ ಠೇವಣಿ ಮಾಡಲು ಅಥವಾ ಬದಲಾಯಿಸಿಕೊಳ್ಳಲು ಯಾವುದೇ ಬ್ಯಾಂಕ್ ಶಾಖೆಯಲ್ಲಿ ಸೆಪ್ಟೆಂಬರ್ 30 ರವರೆಗೆ ಅವಕಾಶ ಇರುತ್ತದೆ ಎಂದು ಹೇಳಿದೆ.

SCROLL FOR NEXT