ಸಹೋದರಿಯೊಂದಿಗೆ ಕ್ರಿಕೆಟಿಗ ಶುಭ್ ಮನ್ ಗಿಲ್ ಚಿತ್ರ 
ದೇಶ

ಆನ್‌ಲೈನ್‌ನಲ್ಲಿ ಗಿಲ್ ಸಹೋದರಿಗೆ ನಿಂದನೆ: ದೆಹಲಿ ಪೊಲೀಸರಿಗೆ ಮಹಿಳಾ ಆಯೋಗ ನೋಟಿಸ್

ಆನ್ ಲೈನ್ ನಲ್ಲಿ ಕ್ರಿಕೆಟಿಗ ಶುಭಮನ್ ಗಿಲ್ ಅವರ ಸಹೋದರಿಗೆ ನಿಂದನೆ, ಅತ್ಯಾಚಾರ , ಹಲ್ಲೆ ಬೆದರಿಕೆ ಹಾಕಿದವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಮಹಿಳಾ ಆಯೋಗವು  ಪೊಲೀಸರಿಗೆ ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ನವದೆಹಲಿ: ಆನ್ ಲೈನ್ ನಲ್ಲಿ ಕ್ರಿಕೆಟಿಗ ಶುಭಮನ್ ಗಿಲ್ ಅವರ ಸಹೋದರಿಗೆ ನಿಂದನೆ, ಅತ್ಯಾಚಾರ , ಹಲ್ಲೆ ಬೆದರಿಕೆ ಹಾಕಿದವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಮಹಿಳಾ ಆಯೋಗವು  ಪೊಲೀಸರಿಗೆ ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಐಪಿಎಲ್‌ನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ  ಗುಜರಾತ್ ಟೈಟನ್ಸ್ ಪರ  ಗಿಲ್ ಭರ್ಜರಿ ಶತಕ ಸಿಡಿಸಿದ್ದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯಾವಳಿಯಿಂದ ಹೊರಬಿದ್ದಿತ್ತು. 

ಪಂದ್ಯದ ನಂತರ, ಗಿಲ್ ಮತ್ತು ಅವರ ಸಹೋದರಿಯನ್ನು ಕೆಲವರು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಟ್ರೋಲಿಂಗ್ ಮತ್ತು ನಿಂದನೆ ಮಾಡಿದ್ದರು. ಶುಭ್ ಮನ್ ಗಿಲ್ ಅವರ ಸಹೋದರಿಗೆ ಟ್ವಿಟರ್, ಇನ್ಸ್ಟಾಗ್ರಾಮ್ ನಂತಹ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ, ಮಹಿಳಾ ದ್ವೇಷ, ಬೆದರಿಕೆ ಅತ್ಯಂತ ನಿಂದನೀಯ ಫೋಸ್ಟ್ ಹಾಕಿರುವುದು ಸಂಪೂರ್ಣ ಅಪರಾಧ ಕೃತ್ಯವಾಗಿದೆ. ಇದು ಅತ್ಯಂತ ಗಂಭೀರ ವಿಷಯವಾಗಿದ್ದು, ತುರ್ತು ಕ್ರಮ ಕೈಗೊಳ್ಳುವಂತಹದ್ದು ಎಂದು ದೆಹಲಿ ಮಹಿಳಾ ಆಯೋಗ ನೋಟಿಸ್ ನಲ್ಲಿ ಹೇಳಿದೆ.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಟ್ವಿಟರ್ ನಲ್ಲಿ ನೋಟಿಸ್ ಹಂಚಿಕೊಂಡಿದ್ದು, ಮೇ 26ರೊಳಗೆ ಕೈಗೊಂಡ ಕ್ರಮದ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು