ದೇಶ

ಕರ್ನಾಟಕ ವಿಧಾನಸೌಧಕ್ಕೆ ನೆಹರು ಅಡಿಪಾಯ ಹಾಕಿದ್ದರು, ಆದರೆ ರಾಜ್ಯಪಾಲರು ಯಾಕೆ ಉದ್ಘಾಟನೆ ಮಾಡಲಿಲ್ಲ?

Shilpa D

ಬೆಂಗಳೂರು: ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಕರ್ನಾಟಕ ವಿಧಾನಸೌಧಕ್ಕೆ ಅಡಿಪಾಯ ಹಾಕಿದ್ದರು. ಕರ್ನಾಟಕದ ರಾಜ್ಯಪಾಲರು ಯಾಕೆ ಉದ್ಘಾಟನೆ ಮಾಡಲಿಲ್ಲ ಎಂದು ಬಿಜೆಪಿ ನಾಯಕ ಸಂಬಿತ್‌ ಪಾತ್ರ ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಂಬಿತ್ ಪಾತ್ರ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಕರ್ನಾಟಕ ವಿಧಾನಸೌಧಕ್ಕೆ ಅಡಿಪಾಯ ಹಾಕಿದ್ದರು. ಕರ್ನಾಟಕದ ರಾಜ್ಯಪಾಲರು ಯಾಕೆ ಉದ್ಘಾಟನೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ  ನೂತನ ಸಂಸತ್‌ ಭವನವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮವನ್ನು ರಾಷ್ಟ್ರಪತಿಗಳು ಮಾಡಬೇಕಿತ್ತು. ರಾಷ್ಟ್ರಪತಿಗಳು ಸಂಸತ್ ಭವನವನ್ನು ಉದ್ಘಾಟನೆ ಮಾಡದೇ ಇರುವುದು ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಎಂದು ವಿಪಕ್ಷಗಳು ಆರೋಪಿಸಿವೆ. ಈ ಕಾರಣ ನೀಡಿ ಕಾಂಗ್ರೆಸ್, ಎಡಪಕ್ಷಗಳು, ಟಿಎಂಸಿ ಸೇರಿದಂತೆ 19 ವಿಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನೆಯ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ.

ವಿಪಕ್ಷಗಳ ನಡೆಯನ್ನು ಖಂಡಿಸಿ ಸಂಬಿತ್‌ ಪಾತ್ರ ಟ್ವೀಟ್‌ ಮಾಡಿ ಈ ಹಿಂದೆ ಯಾವೆಲ್ಲ ಪ್ರಧಾನಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಎಲ್ಲಿ ಏನು ಉದ್ಘಾಟನೆ ಮಾಡಿದ್ದಾರೆ ಎಂಬ ಪಟ್ಟಿಯನ್ನು ರಿಲೀಸ್‌ ಮಾಡಿದ್ದಾರೆ. ಅಷ್ಟೇ ಅಲ್ಲದೇ ಈ ನಾಯಕರು ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿದಾಗ ಯಾರೂ ಬಹಿಷ್ಕಾರ ಹಾಕಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ.

SCROLL FOR NEXT