ದೇಶ

ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ಹಣ ವಸೂಲಿ ಮಾಡುತ್ತಿದ್ದ ಬಿಜೆಪಿ ನಾಯಕಿ ಬಂಧನ

Lingaraj Badiger

ಗುವಾಹಟಿ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಹಲವರಿಂದ 9.52 ಕೋಟಿ ರೂಪಾಯಿ ವಸೂಲಿ ಮಾಡಿದ ಆರೋಪದ ಮೇಲೆ ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲಾ ಬಿಜೆಪಿ ನಾಯಕಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಬಿಜೆಪಿ ಕಿಶನ್ ಮೋರ್ಚಾ ವಿಭಾಗದ ನಾಯಕಿ ಮೂನ್ ಇಂಗ್ಟಿಪಿ ಅವರನ್ನು ಗುರುವಾರ ಬಂಧಿಸಲಾಗಿದೆ. ಬಂಧನದ ನಂತರ, ಬಿಜೆಪಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.

ಬಿಜೆಪಿ ನಾಯಕಿಯ ವಿರುದ್ಧ ಹಲವು ದೂರುಗಳು ಬಂದಿದ್ದು, ಅಧಿಕೃತ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

"ನಾವು ಬಂಧಿಸುವ ಮುನ್ನ ಸಾಕಷ್ಟು ಪುರಾವೆಗಳನ್ನು ಸಂಗ್ರಹಿಸಿದ್ದೇವೆ. ಪೊಲೀಸ್ ತಂಡವು ಪರಿಸ್ಥಿತಿಯನ್ನು ಹೆಚ್ಚು ಕೂಲಂಕಷವಾಗಿ ಪರಿಶೀಲಿಸುತ್ತಿದೆ" ಎಂದು ಕರ್ಬಿ ಆಂಗ್ಲಾಂಗ್ ಜಿಲ್ಲೆಯ ಹೆಚ್ಚುವರಿ ಎಸ್ಪಿ ನಯನ್ ಬರ್ಮನ್ ಹೇಳಿದ್ದಾರೆ.

ಅಸ್ಸಾಂನ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ನೀಡುವ ನೆಪದಲ್ಲಿ ಇಂಗ್ಟಿಪಿ ಅವರು ಕೆಲವರಿಂದ ಗಮನಾರ್ಹ ಮೊತ್ತದ ಹಣಕ್ಕೆ ಬೇಡಿಕೆಯಿಟ್ಟ ನಂತರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

SCROLL FOR NEXT