ನೂತನ ಸಂಸತ್ ಕಟ್ಟಡ 
ದೇಶ

ನೂತನ ಸಂಸತ್ ಭವನ: ಟ್ವಿಟರ್ ನಲ್ಲಿ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ  ನೂತನ ಸಂಸತ್ ಭವನದ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ ಎಂದು ಹೇಳಿದ್ದಾರೆ. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ  ನೂತನ ಸಂಸತ್ ಭವನದ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ ಎಂದು ಹೇಳಿದ್ದಾರೆ.ತಮ್ಮ ಟ್ವೀಟರ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಮೋದಿ, 'ನಮ್ಮ ಸಂಸತ್ ನಮ್ಮ ಹೆಮ್ಮೆ'ಎಂಬ ಹ್ಯಾಶ್‌ಟ್ಯಾಗ್ ಬಳಸಿ ತಮ್ಮ ಧ್ವನಿಯೊಂದಿಗೆ ವೀಡಿಯೊವನ್ನು ಹಂಚಿಕೊಳ್ಳುವಂತೆ ಜನರನ್ನು ಒತ್ತಾಯಿಸಿದ್ದಾರೆ. 

ನೂತನ ಸಂಸತ್ ಭವನ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ. ಈ ವೀಡಿಯೊ ಭವ್ಯ ಕಟ್ಟಡದ ನೋಟವನ್ನು ನೀಡುತ್ತದೆ. ಇದನ್ನು ನಿಮ್ಮ ಸ್ವಂತ ಧ್ವನಿಯೊಂದಿಗೆ ಹಂಚಿಕೊಳ್ಳಿ, ಅವುಗಳಲ್ಲಿ ಕೆಲವನ್ನು ನಾನು ಮರು ಟ್ವೀಟ್ ಮಾಡುತ್ತೇನೆ. #MyParliamentMyPride ಬಳಸಲು ಮರೆಯಬೇಡಿ' ಎಂದು ಪ್ರಧಾನಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಭಾನುವಾರದಂದು ಬೆಳಗ್ಗೆ ಸಾಂಪ್ರಾದಾಯಿಕ ಪೂಜೆ, ಪುನಸ್ಕಾರಗಳೊಂದಿಗೆ ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭ ಪ್ರಾರಂಭವಾಗಲಿದ್ದು, ಸರ್ವ ಧರ್ಮ ಪ್ರಾರ್ಥನೆ  ನಂತರ ಪ್ರಧಾನಿ ಮೋದಿಯವರು ಉದ್ಘಾಟನೆ ನೆರವೇರಿಸಲಿದ್ದಾರೆ. 25 ಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, 20 ವಿರೋಧ ಪಕ್ಷಗಳು ಕಾರ್ಯಕ್ರಮ ಬಹಿಷ್ಕರಿಸಲು ನಿರ್ಧರಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT