ದ್ರೌಪದಿ ಮುರ್ಮು 
ದೇಶ

ರಾಷ್ಟ್ರಪತಿ ಮುರ್ಮು ಜಾತಿ ಬಗ್ಗೆ ಪ್ರಚೋದನಕಾರಿ ಹೇಳಿಕೆ; ಅರವಿಂದ್ ಕೇಜ್ರಿವಾಲ್, ಮಲ್ಲಿಕಾರ್ಜುನ ಖರ್ಗೆ, ಇತರರ ವಿರುದ್ಧ ದೂರು ದಾಖಲು

ನೂತನ ಸಂಸತ್ ಭವನ ಉದ್ಘಾಟನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಾತಿಯನ್ನು ಉಲ್ಲೇಖಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ರಾಜಕೀಯ ನಾಯಕರ ವಿರುದ್ಧ ದೂರು ದಾಖಲಿಸಲಾಗಿದೆ.

ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಾತಿಯನ್ನು ಉಲ್ಲೇಖಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ರಾಜಕೀಯ ನಾಯಕರ ವಿರುದ್ಧ ದೂರು ದಾಖಲಿಸಲಾಗಿದೆ.

ಕೇಜ್ರಿವಾಲ್, ಖರ್ಗೆ ಮತ್ತು ಇತರರು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಮತ್ತು ತಮ್ಮ ರಾಜಕೀಯ ಉದ್ದೇಶಗಳನ್ನು ಈಡೇರಿಸಿಕೊಳ್ಳಲು ಭಾರತ ಸರ್ಕಾರದ ಮೇಲೆ ಅಪನಂಬಿಕೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಪ್ರಕಟಿಸಿದ ವರದಿ ಪ್ರಕಾರ, ದೂರನ್ನು ಐಪಿಸಿಯ ಸೆಕ್ಷನ್ 121, 153A, 505 ಮತ್ತು 34 ಅಡಿಯಲ್ಲಿ ದಾಖಲಿಸಲಾಗಿದೆ.

ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಇತರ ವಿರೋಧ ಪಕ್ಷಗಳು ಗುರಿಯಾಗಿಸಿಕೊಂಡಿವೆ. ಕಾಂಗ್ರೆಸ್, ಸಿಪಿಐ, ಎಎಪಿ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ 20 ಪಕ್ಷಗಳು ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ.

'ನೂತನ ಸಂಸತ್ ಭವನದ ಉದ್ಘಾಟನೆ ಒಂದು ಮಹತ್ವದ ಸಂದರ್ಭವಾಗಿದೆ. ಸರ್ಕಾರವು ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತಿದೆ ಎಂಬ ನಮ್ಮ ನಂಬಿಕೆಯ ಹೊರತಾಗಿಯೂ ಮತ್ತು ಹೊಸ ಸಂಸತ್ತು ನಿರ್ಮಿಸಿದ ನಿರಂಕುಶಾಧಿಕಾರದ ವಿಧಾನಕ್ಕೆ ನಮ್ಮ ಅಸಮ್ಮತಿಯ ಹೊರತಾಗಿಯೂ, ನಮ್ಮ ಭಿನ್ನಾಭಿಪ್ರಾಯಗಳನ್ನು ಹೇಳಲು ಮತ್ತು ಈ ಸಂದರ್ಭವನ್ನು ಗುರುತಿಸಲು ನಾವು ಮುಕ್ತರಾಗಿದ್ದೇವೆ' ಎಂದು ವಿರೋಧ ಪಕ್ಷಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ಆದಾಗ್ಯೂ, ಹೊಸ ಸಂಸತ್ತಿನ ಕಟ್ಟಡವನ್ನು ಸ್ವತಃ ಉದ್ಘಾಟಿಸುವ ಪ್ರಧಾನಿ ಮೋದಿಯವರ ನಿರ್ಧಾರ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಪೂರ್ಣವಾಗಿ ಬದಿಗಿಟ್ಟಿರುವುದು ಘೋರ ಅವಮಾನ ಮಾತ್ರವಲ್ಲ, ಇದು ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ. ಇದು ಸೂಕ್ತ ಪ್ರತಿಕ್ರಿಯೆಯನ್ನು ಬಯಸುತ್ತದೆ ಎಂದು ಹೇಳಿಕೆ ತಿಳಿಸಿದೆ.

ಸಂವಿಧಾನದ 79 ನೇ ವಿಧಿಯ ಬಗ್ಗೆ ಬರೆದಿರುವ ಹೇಳಿಕೆಯಲ್ಲಿ, 'ಒಕ್ಕೂಟ ವ್ಯವಸ್ಥೆಗೆ ಸಂಸತ್ತು ಇರುತ್ತದೆ. ಅದು ರಾಷ್ಟ್ರಪತಿಗಳನ್ನು ಒಳಗೊಂಡಿರುತ್ತದೆ ಮತ್ತು ಎರಡು ಸದನಗಳನ್ನು ಕ್ರಮವಾಗಿ ಕೌನ್ಸಿಲ್ ಆಫ್ ಸ್ಟೇಟ್ಸ್ ಮತ್ತು ಹೌಸ್ ಆಫ್ ದಿ ಪೀಪಲ್ ಎಂದು ಕರೆಯಲಾಗುತ್ತದೆ' ಎಂದಿದೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಮೇ 28 ರಂದು ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT