ಮಲ್ಲಿಕಾರ್ಜುನ ಖರ್ಗೆ 
ದೇಶ

ಕರ್ನಾಟಕದ ಬಳಿಕ ಮಧ್ಯ ಪ್ರದೇಶದತ್ತ ಕಾಂಗ್ರೆಸ್ ಚಿತ್ತ; ಮೇ 29ರಂದು ಸಭೆ ಕರೆದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಮುಂಬರುವ ವಿಧಾನಸಭೆ ಚುನಾವಣೆಗಳ ಮೇಲೆ ಕಣ್ಣಿಟ್ಟಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೇ 29ರಂದು ಮಧ್ಯಪ್ರದೇಶದ ಪಕ್ಷದ ಪ್ರಮುಖರ ಸಭೆಯನ್ನು ಕರೆದಿದ್ದು, ವಿಧಾನಸಭಾ ಚುನಾವಣೆಗೆ ಸಿದ್ಧತೆ ಕುರಿತು ಚರ್ಚಿಸಲಿದ್ದಾರೆ.

ನವದೆಹಲಿ: ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಮುಂಬರುವ ವಿಧಾನಸಭೆ ಚುನಾವಣೆಗಳ ಮೇಲೆ ಕಣ್ಣಿಟ್ಟಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೇ 29ರಂದು ಮಧ್ಯಪ್ರದೇಶದ ಪಕ್ಷದ ಪ್ರಮುಖರ ಸಭೆಯನ್ನು ಕರೆದಿದ್ದು, ವಿಧಾನಸಭಾ ಚುನಾವಣೆಗೆ ಸಿದ್ಧತೆ ಕುರಿತು ಚರ್ಚಿಸಲಿದ್ದಾರೆ.

ಖರ್ಗೆ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್, ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ರಾಜ್ಯ ಉಸ್ತುವಾರಿ ಜೆ.ಪಿ. ಅಗರ್ವಾಲ್ ಸೇರಿದಂತೆ ರಾಜ್ಯದ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಧ್ಯಪ್ರದೇಶದಲ್ಲಿ ಈ ವರ್ಷದ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ.

ಈ ಮೊದಲು ಮೇ 26ರಂದು ಸಭೆ ನಡೆಯಬೇಕಿತ್ತು. ಆದರೆ, ಎರಡು ದಿನಗಳ ಕಾಲ ನಡೆದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಯಿಂದಾಗಿ ಸಭೆಯನ್ನು ಮುಂದೂಡಲಾಗಿತ್ತು.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಮತ್ತು ಶುಕ್ರವಾರದಂದು ಉನ್ನತ ನಾಯಕರ ಜೊತೆ ಸಭೆ ನಡೆಸಿ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದರು.
ಮೇ 29ರ ಸಭೆಯಲ್ಲಿ, ಪಕ್ಷವು ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಮತ್ತು ಜನರಿಗೆ ಭರವಸೆಗಳನ್ನು ನೀಡುವ ಸಾಧ್ಯತೆಯಿದೆ.

ಅಲ್ಲದೆ, ರಾಜ್ಯದ ಪ್ರಚಾರ ಕಾರ್ಯತಂತ್ರವನ್ನೂ ಕಾಂಗ್ರೆಸ್ ನಿರ್ಧರಿಸಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಬಿಜೆಪಿಯ ಹಲವು ಪ್ರಮುಖ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.

2018ರಲ್ಲಿ ಕಮಲ್ ನಾಥ್ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಆದಾಗ್ಯೂ, ಜ್ಯೋತಿರಾದಿತ್ಯ ಸಿಂಧಿಯಾ ಅವರ ಬಂಡಾಯದ ನಂತರ ಸರ್ಕಾರವು ಪತನವಾಯಿತು. ಅವರು ತಮ್ಮ ಹಲವಾರು ಶಾಸಕರೊಂದಿಗೆ ಮಾರ್ಚ್ 2020ರಲ್ಲಿ ಬಿಜೆಪಿಗೆ ಸೇರಿದರು.

ಭ್ರಷ್ಟಾಚಾರ, ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಆಡಳಿತಾರೂಢ ಬಿಜೆಪಿ ವಿರುದ್ಧ ಭಾರಿ ಆಡಳಿತ ವಿರೋಧಿ ಆರೋಪಗಳನ್ನು ಹೊರಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT