ಮಮತಾ ಬ್ಯಾನರ್ಜಿ 
ದೇಶ

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟದಿಂದ 12 ಮಂದಿ ಸಾವು; ಜನರಲ್ಲಿ ಕ್ಷಮೆಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 12 ಜನರು ಮೃತಪಟ್ಟು, ಅನೇಕರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ರಾಜ್ಯದ ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾ ಪ್ರದೇಶದ ಜನರಲ್ಲಿ ಕ್ಷಮೆಯಾಚಿಸಿದರು.

ಎಗ್ರಾ: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 12 ಜನರು ಮೃತಪಟ್ಟು, ಅನೇಕರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ರಾಜ್ಯದ ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾ ಪ್ರದೇಶದ ಜನರಲ್ಲಿ ಕ್ಷಮೆಯಾಚಿಸಿದರು.

ಸ್ಫೋಟದ 11 ದಿನಗಳ ನಂತರ ಖಾಡಿಕುಲ್ ಗ್ರಾಮಕ್ಕೆ ಆಗಮಿಸಿದ ತೃಣಮೂಲ ಕಾಂಗ್ರೆಸ್ ವರಿಷ್ಠರು, ಗುಪ್ತಚರ ವಿಭಾಗವು ಸರಿಯಾಗಿ ಕೆಲಸ ಮಾಡಿದ್ದರೆ, ಈ ಘಟನೆಯನ್ನು ತಪ್ಪಿಸಬಹುದಿತ್ತು ಎಂದು ಹೇಳಿದ್ದಾರೆ.

'ನಾನು ನಿಮಗೆ ತಲೆಬಾಗುತ್ತೇನೆ ಮತ್ತು ಘಟನೆಗೆ (ಮೇ 16ರಂದು ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ) ಕ್ಷಮೆಯಾಚಿಸುತ್ತೇನೆ. ಗುಪ್ತಚರ ವಿಭಾಗವು ಸರಿಯಾಗಿ ಕೆಲಸ ಮಾಡಿದ್ದರೆ, ಈ ಸ್ಫೋಟವನ್ನು ತಪ್ಪಿಸಬಹುದಿತ್ತು' ಎಂದು ಸ್ಫೋಟದಲ್ಲಿ ಸತ್ತವರು ಮತ್ತು ಗಾಯಗೊಂಡವರ ಸಂಬಂಧಿಕರಿಗೆ ಪರಿಹಾರದ ಚೆಕ್ ವಿತರಿಸಿದ ನಂತರ ಬ್ಯಾನರ್ಜಿ ಹೇಳಿದರು.

ಮೇ 16ರ ಸ್ಫೋಟದಲ್ಲಿ ಮೃತರಾದವರ ಕುಟುಂಬದ ತಲಾ ಒಬ್ಬ ಸದಸ್ಯರಿಗೆ 'ಗೃಹರಕ್ಷಕ' ದಳದ ನೇಮಕಾತಿ ಪತ್ರವನ್ನೂ ಅವರು ಹಸ್ತಾಂತರಿಸಿದರು.

ಅಕ್ರಮ ಕಾರ್ಖಾನೆಯ ಮಾಲೀಕರ ಕುಟುಂಬದ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ ಬ್ಯಾನರ್ಜಿ, ಅಂತಹ ಯಾವುದೇ ಘಟಕಗಳು ಕಾರ್ಯನಿರ್ವಹಿಸುತ್ತಿರುವುದನ್ನು ಕಂಡರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಗ್ರಾಮಸ್ಥರನ್ನು ಒತ್ತಾಯಿಸಿದರು.

ಬಂಗಾಳ ಸಿಎಂ ಜತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಎಚ್‌ಕೆ ದ್ವಿವೇದಿ ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT