ದೇಶ

ರಾಜಸ್ಥಾನ: ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ, ಇದೇ ತಿಂಗಳಲ್ಲಿ 5ನೇ ಪ್ರಕರಣ

Nagaraja AB

ಕೋಟಾ: ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ರಾಜಸ್ಥಾನದ ಕೋಟಾದಲ್ಲಿನ ತನ್ನ ಚಿಕ್ಕಪ್ಪನ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.  11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಾಕ್ಷಿ ಚೌಧರಿ ಮೃತ ಪಟ್ಟ ವಿದ್ಯಾರ್ಥಿನಿ. 

ತನ್ನ ಆತ್ಮಹತ್ಯೆಗೆ ಯಾರೂ ಜವಾಬ್ದಾರರಲ್ಲ ಎಂದು ಆಕೆ ಬರೆದಿರುವ ಸೂಸೈಡ್ ನೋಟ್ ನಲ್ಲಿ ಬರೆಯಲಾಗಿದೆ. 10 ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಸರಾಸರಿ ಸಾಧನೆ ಆಕೆಯ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಕುನ್ಹಾರಿ) ಶಂಕರ್ ಲಾಲ್ ಹೇಳಿದ್ದಾರೆ.  ಕೋಟಾದಲ್ಲಿ ನಡೆದಿರುವ ಐದನೇ ಘಟನೆ ಇದಾಗಿದೆ. ಈ ವರ್ಷ ಹತ್ತನೇ ಆತ್ಮಹತ್ಯೆ ಪ್ರಕರಣವಾಗಿದೆ.

ಟೋಂಕ್ ಜಿಲ್ಲೆಯ ನಿವಾಸಿಯಾದ ಚೌಧರಿ, ಕೋಟಾದಲ್ಲಿರುವ ತನ್ನ ಚಿಕ್ಕಪ್ಪನ ಮನೆಯಲ್ಲಿ ತನ್ನ ಇಬ್ಬರು ಸಹೋದರಿಯರೊಂದಿಗೆ ವಾಸಿಸುತ್ತಿದ್ದರು ಮತ್ತು ಇಲ್ಲಿನ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು ಎಂದು ಅವರು ತಿಳಿಸಿದರು.  

ಮರಣೋತ್ತರ ಪರೀಕ್ಷೆ ನಂತರ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಸಿಆರ್‌ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಎಸ್ಪಿ ಲಾಲ್ ತಿಳಿಸಿದ್ದಾರೆ. 

SCROLL FOR NEXT