ಪ್ರತಿಭಟನಾನಿರತರ ವಶಕ್ಕೆ ಪಡೆಯುತ್ತಿರುವ ಪೊಲೀಸರು. 
ದೇಶ

ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆ: ಕುಸ್ತಿಪಟುಗಳು ಸೇರಿ ಹಲವರು ವಶಕ್ಕೆ

ನೂತನವಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ಯತ್ನಿಸಿದ ಒಲಿಂಪಿಯನ್‌ಗಳು ಮತ್ತು ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್‌ಗಳು ಸೇರಿದಂತೆ ಭಾರತದ ಅಗ್ರಮಾನ್ಯ ಕುಸ್ತಿಪಟುಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ನವದೆಹಲಿ: ನೂತನವಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ಯತ್ನಿಸಿದ ಒಲಿಂಪಿಯನ್‌ಗಳು ಮತ್ತು ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್‌ಗಳು ಸೇರಿದಂತೆ ಭಾರತದ ಅಗ್ರಮಾನ್ಯ ಕುಸ್ತಿಪಟುಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಬೇಕೆಂದು ಪಟ್ಟುಹಿಡಿದು ಹಲವು ದಿನಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.

ನೂತನ ಸಂಸತ್ ಭವನ ಉದ್ಘಾಟನೆ ವೇಳೆ ಕುಸ್ತಿಪಟುಗಳು ಪ್ರತಿಭಟನೆ ನಡೆಸುವ ಸಾಧ್ಯತೆಗಳಿದ್ದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಇದರಂತೆ ದೆಹಲಿ ಮೆಟ್ರೋದ ಕೇಂದ್ರ ಸಚಿವಾಲಯ ಮತ್ತು ಉದ್ಯೋಗ್ ಭವನ ನಿಲ್ದಾಣಗಳಲ್ಲಿನ ಎಲ್ಲಾ ಪ್ರವೇಶ ಮತ್ತು ನಿರ್ಗಮನ ಗೇಟ್‌ಗಳನ್ನು ಅಧಿಕಾರಿಗಳು ಬಂದ್ ಮಾಡಿದ್ದರು.

ಪ್ರತಿಭಟನೆಗೆ ನಿರಾಕರಿಸಿದರೂ ಹಿಂಜರಿದ ಕುಸ್ತಿಪಟುಗಳು ಪ್ರತಿಭಟನೆ ಆರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರು ಕುಸ್ತಿಪಟುಗಳು ಸೇರಿದಂತೆ ಹಲವನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ನಾವು ನಮ್ಮ ಕ್ರೀಡಾಪಟುಗಳನ್ನು ಗೌರವಿಸುತ್ತೇವೆ. ಆದರೆ, ಉದ್ಘಾಟನೆಯಲ್ಲಿ ಯಾವುದೇ ಸಮಸ್ಯೆಗಳಾಗಲು ನಾವು ಬಿಡುವುದಿಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆಯ ವಿಶೇಷ ಪೊಲೀಸ್ ಆಯುಕ್ತ ದೇಪೇಂದ್ರ ಪಾಠಕ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್