ದೇಶ

ನೂತನ ಸಂಸತ್ ಭವನ ಲೋಕಾರ್ಪಣೆ: ಐತಿಹಾಸಿಕ ಕಟ್ಟಡವು ಸಬಲೀಕರಣದ ತೊಟ್ಟಿಲಾಗಿರಲಿದೆ; ಪ್ರಧಾನಿ ಮೋದಿ

Manjula VN

ನವದಹಲಿ: ನೂತನ ಸಂಸತ್ ಭವನ ಕಟ್ಟಡವು ಸಬಲೀಕರಣದ ತೊಟ್ಟಿಲಾಗಿರಲಿದೆ ಎಂದು ಪ್ರದಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ.

'ಪ್ರಜಾಪ್ರಭುತ್ವದ ದೇಗುಲ' ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ಪವಿತ್ರ ರಾಜದಂಡ ಸೆಂಗೋಲ್ ನ್ನು ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ಪ್ರತಿಷ್ಟಾಪನೆ ಮಾಡಿದರು.

ನೂತನ ಸಂಸತ್ ಭವನವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಭಾರತದ ಸಂಸತ್ತಿನ ಹೊಸ ಕಟ್ಟಡ ಉದ್ಘಾಟನೆಗೊಂಡಿದ್ದು, ಈ ಮೂಲಕ ನಮ್ಮ ಹೃದಯ ಮತ್ತು ಮನಸ್ಸು ಹೆಮ್ಮೆ, ಭರವಸೆಯಿಂದ ತುಂಬಿವೆ. ಈ ಅಪ್ರತಿಮ ಕಟ್ಟಡವು ಸಬಲೀಕರಣದ ತೊಟ್ಟಿಲು ಆಗಿರಲಿ, ಕನಸುಗಳ ರೂಪಿಸುವ ಮತ್ತು ಅವುಗಳನ್ನು ವಾಸ್ತವಕ್ಕೆ ತರುವುದನ್ನು ಇದು ಖಾತರಿಪಡಿಸುತ್ತದೆ. ಇದು ನಮ್ಮ ರಾಷ್ಟ್ರವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಹೇಳಿದ್ದಾರೆ.

SCROLL FOR NEXT