ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನಾಳೆ ಈಶಾನ್ಯ ಭಾರತದ ಮೊದಲ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಈಶಾನ್ಯ ಭಾರತವನ್ನು ಸಂಪರ್ಕಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚಾಲನೆ ನೀಡಲಿದ್ದಾರೆ.

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು
Lingaraj Badiger
Updated On : 28 May 2023, 8:39 pm

ನವದೆಹಲಿ: ಈಶಾನ್ಯ ಭಾರತವನ್ನು ಸಂಪರ್ಕಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚಾಲನೆ ನೀಡಲಿದ್ದಾರೆ.

ಗುವಾಹಟಿ ರೈಲು ನಿಲ್ದಾಣದಿಂದ ನ್ಯೂ ಜಲ್ಪೈಗುರಿಗೆ ತನ್ನ ಪ್ರಯಾಣವನ್ನು ಪ್ರಾರಂಭಿಸುವ  ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ಮೋದಿ ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ಭಾನುವಾರ ತಿಳಿಸಿದೆ.

ಇದನ್ನು ಓದಿ: ನೂತನ ಸಂಸತ್ ಭವನ ಕೇವಲ ಕಟ್ಟಡವಲ್ಲ, ಇದು ಭಾರತದ 140 ಕೋಟಿ ಜನರ ಆಕಾಂಕ್ಷೆಯ ಸಂಕೇತವಾಗಿದೆ: ಪ್ರಧಾನಿ ಮೋದಿ

Advertisement

Advertisement

ನ್ಯೂ ಜಲ್ಪೈಗುರಿಯೊಂದಿಗೆ ಗುವಾಹಟಿಯನ್ನು ಸಂಪರ್ಕಿಸುವ ಈ ರೈಲು, ಪ್ರಸ್ತುತ ವೇಗದ ರೈಲಿಗೆ ಹೋಲಿಸಿದರೆ ಸುಮಾರು ಒಂದು ಗಂಟೆ ಪ್ರಯಾಣದ ಸಮಯವನ್ನು ಉಳಿಸಲಿದೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಗುವಾಹಟಿಯಿಂದ ನ್ಯೂ ಜಲ್ಪೈಗುರಿ ತಲುಪಲು 5 ಗಂಟೆ 30 ನಿಮಿಷ ತೆಗೆದುಕೊಳ್ಳಲಿದೆ. ಆದರೆ ಪ್ರಸ್ತುತ ವೇಗದ ರೈಲು ಅದೇ ಪ್ರಯಾಣಕ್ಕೆ 6 ಗಂಟೆ 30 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments