ಮಣಿಪುರ 
ದೇಶ

ಮಣಿಪುರದಲ್ಲಿ ಶಸ್ತ್ರಾಸ್ತ್ರ, ಗ್ರೆನೇಡ್‌ ಹೊಂದಿದ್ದ 25 ದುಷ್ಕರ್ಮಿಗಳನ್ನು ಬಂಧಿಸಿದ ಸೇನೆ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಗ್ರೆನೇಡ್‌ಗಳೊಂದಿಗೆ ಕನಿಷ್ಠ 25 ದುಷ್ಕರ್ಮಿಗಳನ್ನು ಭಾರತೀಯ ಸೇನೆ ಮತ್ತು ಅರೆ ಸೇನಾಪಡೆಗಳು ವಶಕ್ಕೆ ಪಡೆದಿವೆ ಎಂದು ಅಧಿಕಾರಿಗಳು ಸೋಮವಾರ...

ಇಂಫಾಲ್: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಗ್ರೆನೇಡ್‌ಗಳೊಂದಿಗೆ ಕನಿಷ್ಠ 25 ದುಷ್ಕರ್ಮಿಗಳನ್ನು ಭಾರತೀಯ ಸೇನೆ ಮತ್ತು ಅರೆ ಸೇನಾಪಡೆಗಳು ವಶಕ್ಕೆ ಪಡೆದಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಇಂಫಾಲ್ ಕಣಿವೆಯಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಗುಂಡಿನ ದಾಳಿ ಹಾಗೂ ಘರ್ಷಣೆಯ ಹೊಸ ಘಟನೆಗಳು ವರದಿಯಾದ ನಂತರ ಶಸ್ತ್ರಾಸ್ತ್ರಗಳೊಂದಿಗೆ ಹಲವು ಜನರನ್ನು ಬಂಧಿಸಲಾಗಿದೆ ಎಂದು ರಕ್ಷಣಾ ಪಡೆಗಳ ವಕ್ತಾರರು ಹೇಳಿದ್ದಾರೆ.

"ಇಂಫಾಲ್ ಪೂರ್ವದ ಸಂಸಾಬಿ, ಗ್ವಾಲ್ಟಾಬಿ, ಶಾಬುಂಕೋಲ್, ಖುನಾವೊದಲ್ಲಿ ನಡೆದ ಕಾರ್ಯಾಚರಣೆಯ ಸಂದರ್ಭದಲ್ಲಿ, ಸೇನೆಯು 22 ದುಷ್ಕರ್ಮಿಗಳನ್ನು ಶಸ್ತ್ರಾಸ್ತ್ರಗಳೊಂದಿಗೆ ಬಂಧಿಸಿದೆ. ಅವರಿಂದ ಐದು 12 ಬೋರ್ ಡಬಲ್ ಬ್ಯಾರೆಲ್ ರೈಫಲ್‌ಗಳು, ಮೂರು ಸಿಂಗಲ್ ಬ್ಯಾರೆಲ್ ರೈಫಲ್‌ಗಳು, ಒಂದು ದೇಶಿ ಡಬಲ್ ಬೋರ್ ಮತ್ತು ಒಂದು ಮೂತಿ ಲೋಡ್ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂಫಾಲ್ ನಗರದಲ್ಲಿ, ಮೊಬೈಲ್ ಚೆಕ್ ಪೋಸ್ಟ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ಕಾರನ್ನು ತಡೆಯಲಾಯಿತು. ಈ ವೇಳೆ ದುಷ್ಕರ್ಮಿಗಳು ಕಾರಿನಿಂದ ಕೆಳಗಿಳಿದು ಪರಾರಿಯಾಗಲು ಯತ್ನಿಸಿದರು. ಆದರೆ ಎಲ್ಲಾ ಮೂವರು ದುಷ್ಕರ್ಮಿಗಳನ್ನು ಬಂಧಿಸಿಸಲಾಗಿದೆ" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT