ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

2024 ಲೋಕಸಭಾ ಚುನಾವಣೆ: ಮುಂದಿನ ತಿಂಗಳು ಪಾಟ್ನಾದಲ್ಲಿ ವಿಪಕ್ಷಗಳ ಸಭೆ, ಮಮತಾ ಭಾಗಿ ಸಾಧ್ಯತೆ

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ವಿಪಕ್ಷಗಳು ಕಸರತ್ತಿನಲ್ಲಿ ತೊಡಗಿವೆ. ಇದರ ಭಾಗವಾಗಿ ಮುಂದಿನ ತಿಂಗಳು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆಯಲಿರುವ ವಿಪಕ್ಷಗಳ ಸಭೆ ನಡೆಯಲಿದ್ದು, ಅದರಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವ ನಿರೀಕ್ಷೆಯಿದೆ

ನಿತೀಶ್ ಕುಮಾರ್, ಮಮತಾ ಬ್ಯಾನರ್ಜಿ ಸಾಂದರ್ಭಿಕ ಚಿತ್ರ
Nagaraja AB
Updated On : 29 May 2023, 2:02 pm

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ವಿಪಕ್ಷಗಳು ಕಸರತ್ತಿನಲ್ಲಿ ತೊಡಗಿವೆ. ಇದರ ಭಾಗವಾಗಿ ಮುಂದಿನ ತಿಂಗಳು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆಯಲಿರುವ ವಿಪಕ್ಷಗಳ ಸಭೆ ನಡೆಯಲಿದ್ದು, ಅದರಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ಸೋಮವಾರ ತಿಳಿಸಿವೆ.

ಈ ಸಂಬಂಧ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸಭೆ ನಡೆದಿದ್ದು, ಜೂನ್ 12 ರಂದು ಪಾಟ್ನಾದಲ್ಲಿ ವಿಪಕ್ಷಗಳ ಬಹು ನಿರೀಕ್ಷಿತ ಸಭೆ ನಡೆಯಲಿದೆ ಎಂದು ಮೂಲಗಳು ಹೇಳಿವೆ. ಈ ಸಭೆಯಲ್ಲಿ ಮಮತಾ ಬ್ಯಾನರ್ಜಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ವಿಪಕ್ಷಗಳ ಒಕ್ಕೂಟವನ್ನು ಬಲಪಡಿಸುವುದಕ್ಕೆ ಮಮತಾ ಬ್ಯಾನರ್ಜಿ ಕೂಡಾ ಆಲೋಚನೆ ಹೊಂದಿರುವುದಾಗಿ ಹಿರಿಯ ಟಿಎಂಸಿ ಮುಖಂಡರೊಬ್ಬರು ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ತಿಳಿಸಿದೆ. ಕಳೆದ ತಿಂಗಳು ಕೋಲ್ಕತ್ತಾದಲ್ಲಿ ನಿತೀಶ್  ಕುಮಾರ್ ಅವರನ್ನು ಭೇಟಿಯಾದಾಗ ಜಯಪ್ರಕಾಶ್ ನಾರಾಯಣ್ ಅವರನ್ನು ನೆನಪಿಸಿಕೊಂಡ ಬ್ಯಾನರ್ಜಿ, ಪಾಟ್ನಾದಲ್ಲಿ ವಿರೋಧ ಪಕ್ಷದ ನಾಯಕರ ಸಭೆ ಆಯೋಜನೆಗೆ ಸಲಹೆ ನೀಡಿದ್ದಾಗಿ ಅವರು ತಿಳಿಸಿದ್ದಾರೆ. 

Advertisement

Advertisement

ಇದನ್ನೂ ಓದಿ: ಪ್ರಧಾನಿ ಹುದ್ದೆ ಆಕಾಂಕ್ಷಿಗಳಿಂದ ರಾಜಕೀಯ ಪ್ರವಾಸ ಆರಂಭ: ಕೇಜ್ರಿವಾಲ್-ಮಮತಾ ಭೇಟಿಗೆ ಬಿಜೆಪಿ ಟಾಂಗ್

ಈ ತಿಂಗಳ ಆರಂಭದಲ್ಲಿ ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ನಂತರ ಅದು ಪ್ರಬಲವಾಗಿರುವ ಕಡೆಗಳಲ್ಲಿ 2024 ರ ಲೋಕಸಭೆ ಚುನಾವಣೆಯಲ್ಲಿ ಬೆಂಬಲಿಸುವುದಾಗಿ ಬ್ಯಾನರ್ಜಿ ಹೇಳಿದ್ದರು.ಪ್ರಾದೇಶಿಕ ಪಕ್ಷಗಳು ಪ್ರಬಲವಾಗಿರುವ ಕಡೆಗಳಲ್ಲಿ ಸೀಟು ಹಂಚಿಕೆ ಸೂತ್ರದ ಭರವಸೆ ಕೂಡಾ ನೀಡಿದ್ದರು. 

ನಿತೀಶ್ ಕುಮಾರ್ ಕಳೆದ ಆಗಸ್ಟ್ ನಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಂಡಾಗಿನಿಂದಲೂ ವಿಪಕ್ಷಗಳ ಮೈತ್ರಿಕೂಟ ರಚನೆಗಾಗಿ ಹೋರಾಡುತ್ತಿದ್ದಾರೆ. ಇದರ ಭಾಗವಾಗಿ ಇತ್ತೀಚಿಗೆ ಕಾಂಗ್ರೆಸ್ ಮಿತ್ರರಾದ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಮಾತ್ರವಲ್ಲದೆ ಅದರ ವಿರೋಧಿಗಳಾದ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments