ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ 
ದೇಶ

ಅಸ್ಸಾಂನಲ್ಲಿ ಮೊದಲ 'ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರಿಂದು ಅಸ್ಸಾಂನಲ್ಲಿ ಈಶಾನ್ಯ ಭಾರತದ ಮೊದಲ 'ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿ' ಗೆ ವರ್ಚುಯಲ್ ಮೂಲಕ ಚಾಲನೆ ನೀಡಿದರು. ಈ ರೈಲು ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣ ಮತ್ತು ಅಸ್ಸಾಂನ ಗುವಾಹಟಿ ನಡುವೆ ಚಲಿಸುತ್ತದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಅಸ್ಸಾಂನಲ್ಲಿ ಈಶಾನ್ಯ ಭಾರತದ ಮೊದಲ 'ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿ' ಗೆ ವರ್ಚುಯಲ್ ಮೂಲಕ ಚಾಲನೆ ನೀಡಿದರು. ಈ ರೈಲು ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣ ಮತ್ತು ಅಸ್ಸಾಂನ ಗುವಾಹಟಿ ನಡುವೆ ಚಲಿಸುತ್ತದೆ.

ನಂತರ ಮಾತನಾಡಿದ ಪ್ರಧಾನಿ, ಅಸ್ಸಾಂ ಸೇರಿದಂತೆ ಇಡೀ ಈಶಾನ್ಯ ಭಾರತದ ರೈಲ್ವೆ ಸಂಪರ್ಕತೆಗೆ ಇಂದು ಮಹತ್ವದ ದಿನವಾಗಿದೆ. ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಜನರ ಜೀವನವನ್ನು ಸುಲಭಗೊಳಿಸುತ್ತದೆ ಮತ್ತು ಇದು ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೂ ಉತ್ತೇಜನ ನೀಡುತ್ತದೆ ಎಂದರು. 

ಕಳೆದ 9 ವರ್ಷಗಳಲ್ಲಿ ನವ ಭಾರತ ನಿರ್ಮಾಣಕ್ಕಾಗಿ ಅಭೂತಪೂರ್ವ ಸಾಧನೆ ಮಾಡಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರ ಕಲ್ಯಾಣ, ಯಾವುದೇ ತಾರತಮ್ಯ ಇಲ್ಲದೆ ಎಲ್ಲರಿಗೂ ಮೂಲಸೌಕರ್ಯ ಕಲ್ಪಿಸಲು  ಹೆಚ್ಚಿನ ಆದ್ಯತೆ ನೀಡಿದೆ. ಅದಕ್ಕಾಗಿಯೇ ಈ ಮೂಲಸೌಕರ್ಯ ನಿರ್ಮಾಣ, ಒಂದು ರೀತಿಯಲ್ಲಿ ನಿಜವಾದ ಸಾಮಾಜಿಕ ನ್ಯಾಯ, ನಿಜವಾದ ಜಾತ್ಯತೀತತೆ ಎಂದು ಪ್ರಧಾನಿ ಹೇಳಿದರು. 

2014 ರ ಮೊದಲು, ಈಶಾನ್ಯಕ್ಕೆ ರೈಲ್ವೆ ಬಜೆಟ್ ರೂ. 2,500 ಕೋಟಿ ಆಗಿತ್ತು. ಈಗ ಅದು ರೂ. 10.000 ಕೋಟಿಗೂ ಹೆಚ್ಚು ಅಂದರೆ 4 ಪಟ್ಟು ಏರಿಕೆಯಾಗಿದೆ. ಈಶಾನ್ಯದ ಎಲ್ಲಾ ಭಾಗಗಳನ್ನು ಶೀಘ್ರದಲ್ಲೇ ಬ್ರಾಡ್-ಗೇಜ್ ನೆಟ್ ವರ್ಕ್ ಮೂಲಕ ಸಂಪರ್ಕಿಸಲಾಗುವುದು. ಇದಕ್ಕಾಗಿ ರೂ.1 ಲಕ್ಷ ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ