ಸಂಗ್ರಹ ಚಿತ್ರ 
ದೇಶ

NMC ಮಾನದಂಡ ಅನುಸರಣೆಯಲ್ಲಿ ಲೋಪ: 40 ವೈದ್ಯಕೀಯ ಕಾಲೇಜುಗಳ ಮಾನ್ಯತೆ ರದ್ದು, ಇನ್ನೂ 100 ಸಂಸ್ಥೆಗಳು ವೀಕ್ಷಣೆಯಲ್ಲಿ!!

ಭಾರತದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸದ ಕಾರಣ ಕಳೆದ ಒಂದರಿಂದ ಎರಡು ತಿಂಗಳ ಅವಧಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನವದೆಹಲಿ: ಭಾರತದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸದ ಕಾರಣ ಕಳೆದ ಒಂದರಿಂದ ಎರಡು ತಿಂಗಳ ಅವಧಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಧಿಕೃತ ಮೂಲಗಳ ಪ್ರಕಾರ, ಭಾರತದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ನಿಗದಿಪಡಿಸಿದ ಮಾನದಂಡಗಳ ಪಾಲನೆಯಲ್ಲಿ ಲೋಪದೋಷ ಕಂಡುಬಂದ ಹಿನ್ನಲೆಯಲ್ಲಿ ದೇಶಾದ್ಯಂತ ಕಳೆದ 2 ತಿಂಗಳ ಅವಧಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ. ಅಲ್ಲದೆ ಪುದುಚೇರಿ, ಗುಜರಾತ್, ಅಸ್ಸಾಂ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಇನ್ನೂ 100 ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಎನ್‌ಎಂಸಿಯ ಮಾನದಂಡಗಳನ್ನು ಅನುಸರಿಸದ ಕಾರಣ ಮಾನ್ಯತೆಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ.

ಅಚ್ಚರಿ ಎಂದರೆ ಸುಮಾರು 100ಕ್ಕೂ ಹೆಚ್ಚು ವರ್ಷಗಳಷ್ಟು ಹಳೆಯದಾದ ಅರುಣಾಚಲ ಪ್ರದೇಶದ ಪ್ರಮುಖ ವೈದ್ಯಕೀಯ ಕಾಲೇಜು ಸಂಸ್ಥೆ ಕೂಡ ಎನ್‌ಎಂಸಿಯ ದಮನದ ಭಾಗವಾಗಿ ಮಾನ್ಯತೆ ಕಳೆದುಕೊಂಡಿದೆ. ಈ ಸಂಸ್ಥೆಗಳು ಮಾನದಂಡಗಳನ್ನು ಅನುಸರಿಸದಿರುವುದು ಮತ್ತು ಅಧ್ಯಾಪಕರು ಮತ್ತು ಭದ್ರತಾ (ಸಿಸಿಟಿವಿ) ಕ್ಯಾಮೆರಾಗಳಿಗೆ ಸಂಬಂಧಿಸಿದ ಲೋಪಗಳ ಕಾರಣದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇದಲ್ಲದೆ, ಕೆಲವು ವೈದ್ಯರು ಎನ್‌ಎಂಸಿ ತೆಗೆದುಕೊಂಡ ಕ್ರಮದ ಕುರಿತು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದಿದ್ದು, ಮಾನದಂಡಗಳನ್ನು ಅನುಸರಿಸದಿರುವುದು ಈ ಸಂಸ್ಥೆಗಳ ಇತರ ಲೋಪಗಳಾಗಿವೆ. ತಮ್ಮ ಪತ್ರದಲ್ಲಿ, ವೈದ್ಯರು ಈ ಕ್ರಮವು ತಮ್ಮ ವೃತ್ತಿಜೀವನದ ಮೇಲೆ ಪರಿಣಾಮ ಬೀರಬಹುದು ಮತ್ತು ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳಬಹುದು ಎಂಬ ಭಯವನ್ನು ವ್ಯಕ್ತಪಡಿಸಿದ್ದಾರೆ. 

ಸರ್ಕಾರದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 2014 ರಲ್ಲಿ 387 ರಿಂದ ಪ್ರಸ್ತುತ 654 ಕ್ಕೆ ಏರಿದೆ, ಇದು ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಎಂಬಿಬಿಎಸ್ ಸೀಟುಗಳ ಸಂಖ್ಯೆಯೂ ಶೇ.94ರಷ್ಟು ಏರಿಕೆ ಕಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT