ದೇಶ

ದೆಹಲಿ ಅಬಕಾರಿ ಹಗರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕೃತ

Manjula VN

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪ್ರಕರಣದಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನಿರಾಕರಿಸಿದೆ.

ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ನೇತೃತ್ವದ  ಏಕಸದಸ್ಯ ಪೀಠ, ಮನೀಶ್ ಸಿಸೋಡಿಯಾ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದು ಹೇಳಿದೆ.

ಜಾಮೀನು ಅರ್ಜಿಯ ಕುರಿತು ತೀರ್ಪು ಪ್ರಕಟಿಸಿದ ಹೈಕೋರ್ಟ್, ಸಿಸೋಡಿಯಾ ಪ್ರಭಾವಿ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ.

ಈ ನಡುವೆ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ್ದು, ಈ ಆದೇಶ ಪ್ರಶ್ನಿಸಿ ಸಿಸೋಡಿಯಾ ಅವರು ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

SCROLL FOR NEXT