ಸಾಂದರ್ಭಿಕ ಚಿತ್ರ 
ದೇಶ

ಕೇರಳ: ಕಾಸರಗೋಡಿನಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಸ್ತು ವಶ

ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಅಪಾರ ಪ್ರಮಾಣದ ಸ್ಪೋಟಕ ವಸ್ತುಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ತಿರುವನಂತಪುರಂ: ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಅಪಾರ ಪ್ರಮಾಣದ ಸ್ಪೋಟಕ ವಸ್ತುಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. 6,000 ಡಿಟೋನೇಟರ್‌ಗಳು, 2,800 ಜಿಲೆಟಿನ್ ಕಡ್ಡಿಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಮುಂದಿನ ತನಿಖೆ ಕೈಗೊಂಡಿದ್ದಾರೆ. 

ಅಧಿಕಾರಿಗಳು ದಿನನಿತ್ಯದಂತೆ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಮ್ಮದ್ ಮುಸ್ತಫಾ ಎಂಬುವವರ ವಾಹನದಲ್ಲಿ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿವೆ. ನಂತರ ಅವರ ಮನೆಗೆ  ತೆರಳಿದಾಗ ಉಳಿದ ಸಂಗ್ರಹವನ್ನು ವಶಪಡಿಸಿಕೊಂಡಿದ್ದಾರೆ.

ಮನೆಗೆ ಹೋದಾಗ ವಾಶ್ ರೂಮ್ ಗೆ ಹೋದ ಮುಸ್ತಾಫಾ ಹೊರಗೆ ಬಂದಿಲ್ಲ. ನಂತರ ಅಧಿಕಾರಿಗಳು ಬಾಗಿಲು ಒಡೆದು ನೋಡಿದಾಗ ಆತ ತನ್ನ ಅಂಗೈ ಕಡಿದುಕೊಂಡಿರುವುದು ಪತ್ತೆಯಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ನಂತರ ವಿಚಾರಣೆಗೆ ಒಳಪಡಿಸಿದಾಗ, ಕರ್ನಾಟಕದ ಕ್ವಾರಿ ಮಾಲೀಕರಿಗೆ ಸರಬರಾಜು ಮಾಡಲು ಈ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿದ್ದಾಗಿ ಮುಸ್ತಾಫ ಹೇಳಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ವಿವರವಾದ ತನಿಖೆ ಆರಂಭಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ