ದೇಶ

ಕುಸ್ತಿಪಟುಗಳ ಪ್ರತಿಭಟನೆ; ತನಿಖೆ ಮುಗಿದ ನಂತರ ಕ್ರಮ: ಕೇಂದ್ರ ಸಚಿವ ರಾಜನಾಥ್ ಸಿಂಗ್

Srinivasamurthy VN

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಮುಗಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ (BJP) ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಫೆಡರೇಶನ್‌ನಿಂದ ವಜಾಗೊಳಿಸುವಂತೆ ಮತ್ತು ಅವರನ್ನು ಬಂಧಿಸುವಂತೆ ಒತ್ತಾಯಿಸಿ ದೇಶದ ಕೆಲವು ಪ್ರಮುಖ ಕುಸ್ತಿಪಟುಗಳು ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿ ಪೊಲೀಸರು ಬ್ರಿಜ್ ಭೂಷಣ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. 

ಈ ವಿಚಾರದ ಬಗ್ಗೆ ಮಾತನಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, "ಈ ವಿಷಯದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಮುಗಿದ ನಂತರ ಕೇಂದ್ರ ಸರ್ಕಾರವು ಈ ವಿಷಯದಲ್ಲಿ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಕುಟುಂಬ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಅವರು ಬಂದಿದ್ದರು. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನದ ಉದ್ಘಾಟನೆಗೆ ಎಲ್ಲ ರಾಜಕೀಯ ಪಕ್ಷಗಳು ಹಾಜರಾಗಬೇಕಿತ್ತು. ಹೊಸ ಲೋಕಸಭೆ ಭವನದ ಉದ್ಘಾಟನೆಯು ಎಲ್ಲಾ ರಾಜಕೀಯ ಪಕ್ಷಗಳು ಭಾಗವಹಿಸಬೇಕಾದ ಸಾರ್ವಜನಿಕ ಕಾರ್ಯಕ್ರಮವಾಗಿತ್ತು. ಇದು ಸದನದ ಅಧಿವೇಶನವಾಗಿರಲಿಲ್ಲ. ಇದು ದೇಶಕ್ಕೆ ಹೆಮ್ಮೆಯ ವಿಷಯ" ಎಂದು ರಕ್ಷಣಾ ಸಚಿವರು ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ರಾಷ್ಟ್ರವು ಪ್ರಗತಿ ಸಾಧಿಸಿದ್ದು, ನಿರುದ್ಯೋಗ ಪ್ರಮಾಣದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಸರ್ಕಾರದ ಯೋಜನೆಗಳ ಲಾಭ ಎಲ್ಲರಿಗೂ ತಲುಪಿದ್ದು, 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಎನ್‌ಡಿಎ (ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್) ಬಹುಮತದೊಂದಿಗೆ ಮತ್ತೆ ಸರ್ಕಾರ ರಚಿಸಲಿದೆ ಎಂದು ರಾಜನಾಥ್ ಸಿಂಗ್ ಹೇಳಿದರು.
 

SCROLL FOR NEXT