ದೇಶ

ಇಂಡಿಗೋ ವಿಮಾನದಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್

Lingaraj Badiger

ನವದೆಹಲಿ: ಖಾಸಗಿ ವಿಮಾನಯಾನ ಸಂಸ್ಥೆ ಇಂಡಿಗೋ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಬುಧವಾರ ಆರೋಪಿಸಿದ್ದಾರೆ.

ಇಂಡಿಗೋದ ಎರಡು ವಿಮಾನಗಳಲ್ಲಿ "ಏನೋ ವಾಡಿಕೆ ಎಂಬಂತೆ" ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಲಾಗುತ್ತದೆ ಮತ್ತು ತಕ್ಷಣವೇ ಪ್ರಯಾಣಿಕರಿಗೆ ಮುಂಬರುವ ಚುನಾವಣೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಲಾಗುತ್ತದೆ. ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಮತ ಮನವಿಯಲ್ಲಿ ಚುನಾವಣಾ ಆಯೋಗದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಕಳೆದ ವಾರ, ನಾನು ಐಜ್ವಾಲ್‌ಗೆ ಮತ್ತು ದೆಹಲಿಗೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಿದ್ದೆ. ಎರಡೂ ಮಾರ್ಗಗಳಲ್ಲಿ ಕ್ಯಾಬಿನ್ ಸಿಬ್ಬಂದಿಯ ಪ್ರಕಟಣೆಯು ಪ್ರಧಾನಿ 'ಶ್ರೀ ನರೇಂದ್ರ ಮೋದಿಜಿ' ಅವರನ್ನು ವಾಡಿಕೆಯ ಮತ್ತು ಅಸಮಂಜಸವಾದ ಸಂಗತಿಗಾಗಿ ಶ್ಲಾಘಿಸಲಾಗುತ್ತದೆ. ಈ ಪ್ರಕಟಣೆ ಮುಗಿದ ತಕ್ಷಣವೇ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗಳಲ್ಲಿ ಮತ ಚಲಾಯಿಸುವಂತೆ ಪ್ರಯಾಣಿಕರಿಗೆ ಮನವಿ ಮಾಡಲಾಯಿತು" ಎಂದು ಜೈರಾಮ್ ರಮೇಶ್ ದೂರಿದ್ದಾರೆ.

ಈ ಪ್ರಕಟಣೆಯಲ್ಲಿ ಚುನಾವಣಾ ಆಯೋಗದ ಬಗ್ಗೆ ಯಾವುದೇ ಉಲ್ಲೇಖವಿಲ್ಲ - ಇದು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರೋಪಿಸಿದ್ದಾರೆ.

ಜೈರಮ್ ರಮೇಶ್ ಅವರ ಆರೋಪಕ್ಕೆ ವಿಮಾನಯಾನ ಸಂಸ್ಥೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

SCROLL FOR NEXT