ದೇಶ

ಪಿಎಂಎಲ್‌ಎ ಪ್ರಕರಣ: ನರೇಶ್ ಗೋಯಲ್ ಕುಟುಂಬಕ್ಕೆ ಸೇರಿದ 538 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

Lingaraj Badiger

ನವದೆಹಲಿ: ಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ರೂ. ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಕಂಪನಿಗಳಿಗೆ ಸಂಬಂಧಿಸಿದ 538 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ ಬುಧವಾರ ತಿಳಿಸಿದೆ.

ತನಿಖಾ ಸಂಸ್ಥೆಯ ಪ್ರಕಟಣೆಯ ಪ್ರಕಾರ, ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್, ಅವರ ಪತ್ನಿ ಶ್ರೀಮತಿ ಅನಿತಾ ಗೋಯಲ್ ಮತ್ತು ಪುತ್ರ ನಿವಾನ್ ಗೋಯಲ್, ಜೆಟ್ ಏರ್ ಪ್ರೈವೇಟ್ ಲಿಮಿಟೆಡ್ ಸಂಬಂಧಿಸಿದ ವಿವಿಧ ವ್ಯಕ್ತಿಗಳು ಮತ್ತು ಕಂಪನಿಗಳ ಹೆಸರಿನಲ್ಲಿದ್ದ 17 ವಸತಿ ಫ್ಲಾಟ್‌ಗಳು/ಬಂಗಲೆಗಳು ಮತ್ತು ವಾಣಿಜ್ಯ ಮಳಿಗೆಗಳನ್ನು ಜಪ್ತಿ ಮಾಡಲಾಗಿದೆ.

ಜಪ್ತಿ ಮಾಡಲಾದ ಆಸ್ತಿಗಳಲ್ಲಿ 17 ವಸತಿ ಫ್ಲಾಟ್‌ಗಳು, ಬಂಗಲೆಗಳು ಮತ್ತು ವಾಣಿಜ್ಯ ಮಳಿಗೆಗಳು ಸೇರಿವೆ.

ಲಂಡನ್, ದುಬೈ ಮತ್ತು ಭಾರತದ ವಿವಿಧ ನಗರಗಳಲ್ಲಿರುವ ಈ ಆಸ್ತಿಗಳು ಜೆಟ್ ಏರ್ ಪ್ರೈವೇಟ್ ಲಿಮಿಟೆಡ್ ಮತ್ತು ಜೆಟ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್, ಗೋಯಲ್, ಅವರ ಪತ್ನಿ ಅನಿತಾ ಮತ್ತು ಮಗ ನಿವಾನ್‌ ಅವರಿಗೆ ಸಂಬಂಧಿಸಿದ ವಿವಿಧ ಕಂಪನಿಗಳ ಹೆಸರಿನಲ್ಲಿವೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.

ಬ್ಯಾಂಕ್ ಗೆ ವಂಚಿಸಿದ ಆರೋಪದ ಮೇಲೆ ಕಳೆದ ಸೆಪ್ಟೆಂಬರ್‌ನಲ್ಲಿ ಬಂಧಿಸಲ್ಪಟ್ಟ ನರೇಶ್ ಗೋಯಲ್ ಅವರ ವಿರುದ್ಧ ಇಡಿ ಮಂಗಳವಾರ ಚಾರ್ಜ್‌ಶೀಟ್ ಸಲ್ಲಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

SCROLL FOR NEXT