ಮಹುವಾ ಮೊಯಿತ್ರಾ 
ದೇಶ

ಪ್ರಶ್ನೆಗಾಗಿ ಲಂಚ ಪ್ರಕರಣ: ನೈತಿಕ ಸಮಿತಿ ಮುಂದೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹಾಜರು

ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಗುರುವಾರ...

ನವದೆಹಲಿ: ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಗುರುವಾರ ಲೋಕಸಭೆಯ ನೈತಿಕ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಮೊಯಿತ್ರಾ ವಿರುದ್ಧ ಮಾಡಿದ ಲಂಚದ ಆರೋಪದ ಬಗ್ಗೆ ನೈತಿಕ ಸಮಿತಿ ತನಿಖೆ ನಡೆಸುತ್ತಿದೆ. 

ಸಮಿತಿಯು ಪ್ರಶ್ನೆಗಾಗಿ ಲಂಚ ಪ್ರಕರಣದ ತನಿಖೆ ಮಾಡಲು ಕೇಂದ್ರ ಗೃಹ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಗಳಿಂದ ಸಹಾಯ ಪಡೆದುಕೊಂಡಿದೆ ಮತ್ತು ಅವರಿಂದ ವಿವರಗಳನ್ನು ಪಡೆದಿದೆ ಎಂದು ನಂಬಲಾಗಿದೆ.

ಈ ಸಂಬಂಧ ಲೋಕಸಭೆಯ ನೈತಿಕ ಸಮಿತಿಯು ಈಗಾಗಲೇ ಬಿಜೆಪಿ ನಾಯಕ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಅವರ ಹೇಳಿಕೆ ಪಡೆದಿದ್ದು, ಈಗ ಮಹುವಾ ಮೊಯಿತ್ರಾ ಅವರ ಉತ್ತರ ಪಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!