ರಾಜ್ ಕುಮಾರ್ ಆನಂದ್ ಮನೆ ಮೇಲೆ ಇಡಿ ದಾಳಿ 
ದೇಶ

ಕೇಜ್ರಿವಾಲ್ ಗೆ ಸಮನ್ಸ್‌ ಬೆನ್ನಲ್ಲೇ ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ಮನೆ ಮೇಲೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಗುರುವಾರ ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಪ್ ನಾಯಕ ರಾಜ್ ಕುಮಾರ್ ಆನಂದ್ ಅವರ ನಿವಾಸದ ಮೇಲೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಗುರುವಾರ ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಪ್ ನಾಯಕ ರಾಜ್ ಕುಮಾರ್ ಆನಂದ್ ಅವರ ನಿವಾಸದ ಮೇಲೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ ಸಚಿವರ ನಿವೇಶನ ಮತ್ತು ಇತರ ಕೆಲವು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇಡಿ ಅಧಿಕಾರಿಗಳ ಶೋಧ ತಂಡಕ್ಕೆ ಸಿಆರ್‌ಪಿಎಫ್‌ ಸಿಬ್ಬಂದಿ ಭದ್ರತೆ ಒಗಿಸಿದ್ದಾರೆ.

57 ವರ್ಷದ ಆನಂದ್ ಅವರು ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದಲ್ಲಿ ಸಮಾಜ ಕಲ್ಯಾಣ ಮತ್ತು SC/ST ಕಲ್ಯಾಣ ಸಚಿವರಾಗಿದ್ದಾರೆ. ಅವರು ಪಟೇಲ್ ನಗರದ ಶಾಸಕರಾಗಿದ್ದಾರೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಲು ಇಡಿ ಸಮನ್ಸ್ ನೀಡಿದೆ. ಆದರೆ ದೆಹಲಿ ಸಿಎಂ ಇದುವರೆಗೂ ವಿಚಾರಣೆಗೆ ಹಾಜರಾಗಿಲ್ಲ ಮತ್ತು ವಿಚಾರಣೆಗೆ ಗೈರು ಆಗುವ ಸಾಧ್ಯತೆ ಇದೆ ಎಂದು ಎಎಪಿ ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ