ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಫುರ್ಕಾಯಸ್ಥ 
ದೇಶ

ಡಿ.1ರವರೆಗೆ ನ್ಯೂಸ್‌ಕ್ಲಿಕ್ ಸಂಸ್ಥಾಪಕ, ಹೆಚ್ ಆರ್ ಮುಖ್ಯಸ್ಥ ಜೈಲಿಗೆ!

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಹಾಗೂ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ನ್ಯಾಯಾಲಯ ಡಿಸೆಂಬರ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ನವದೆಹಲಿ: ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಹಾಗೂ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ನ್ಯಾಯಾಲಯ ಡಿಸೆಂಬರ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಚೀನಾ ಪರ ಪ್ರಚಾರ ಮಾಡಲು ಹಣ ಪಡೆದ ಆರೋಪದ ಮೇರೆಗೆ ಉಗ್ರ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾದ ಪ್ರಕರಣದ ತನಿಖೆಯ ಸಮಯದಲ್ಲಿ ತನ್ನ ಎಲೆಕ್ಟ್ರಾನಿಕ್ ಸಾಧನಗಳನ್ನು ಬಿಡುಗಡೆ ಮಾಡುವಂತೆ ಪ್ರಬೀರ್ ಪುರ್ಕಾಯಸ್ಥ ಸಲ್ಲಿಸಿದ ಅರ್ಜಿಗೆ ಉತ್ತರ ನೀಡಲು ಮುಂಬೈನ ನ್ಯಾಯಾಲಯ ದೆಹಲಿ ಪೊಲೀಸರಿಗೆ 10 ದಿನಗಳ ಕಾಲಾವಕಾಶ ನೀಡಿದೆ. 

ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಅವರನ್ನು ನವೆಂಬರ್ 2, 2023 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಈ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಮತ್ತೆ ಒಂದು ತಿಂಗಳ ಕಾಲ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ವಿಸ್ತರಿಸಿದೆ.  

ಚೀನಾ ಪರ ಪ್ರಚಾರಕ್ಕಾಗಿ ಪೋರ್ಟಲ್‌ಗೆ ಹಣ ಬಂದಿದೆ ಎಂಬ ಆರೋಪದ ಮೇಲೆ ಅಕ್ಟೋಬರ್ 3 ರಂದು ದೆಹಲಿ ಪೊಲೀಸ್ ವಿಶೇಷ ಘಟಕವನ್ನು ಇಬ್ಬರನ್ನು ಬಂಧಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT