ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಔಷಧ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ನಾಲ್ವರು ಸಾವು, ಏಳು ಮಂದಿಗೆ ಗಾಯ 

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ. ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ. ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ರಾಯಗಢದ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ ಜೆಟ್ ಹೆಲ್ತ್‌ಕೇರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಅಧಿಕಾರಿ ತಿಳಿಸಿದ್ದಾರೆ.

ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ನಾಪತ್ತೆಯಾದ 11 ಜನರಲ್ಲಿ ಬೆಳಿಗ್ಗೆ 7 ಗಂಟೆಯವರೆಗೆ ನಾಲ್ವರ ಶವಗಳನ್ನು ಹೊರತೆಗೆಯಲಾಗಿದೆ. ನಾಪತ್ತೆಯಾಗಿರುವ ಏಳು ಜನರ ಪತ್ತೆಗಾಗಿ  ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಅಧಿಕಾರಿ ತಿಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರ್ಖಾನೆಯಲ್ಲಿ ಬೆಂಕಿ ವ್ಯಾಪಿಸಿದ್ದು, ಬಳಿಕ ರಾಸಾಯನಿಕಗಳನ್ನು ಒಳಗೊಂಡಿರುವ ಬ್ಯಾರೆಲ್ ಗಳಲ್ಲಿನ ಸ್ಫೋಟಕ್ಕೆ ಕಾರಣವೆಂದು ತಿಳಿದುಬಂದಿದೆ. ಈ ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್