ಸಚಿನ್ ಪೈಲಟ್ 
ದೇಶ

ಬಿಜೆಪಿ ಧರ್ಮದ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸಲು ಯತ್ನಿಸುತ್ತಿದೆ: ಸಚಿನ್ ಪೈಲಟ್

ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಧರ್ಮದ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ರಾಜಸ್ಥಾನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಶನಿವಾರ ಆರೋಪಿಸಿದ್ದಾರೆ ಮತ್ತು ಜನ ಎಚ್ಚರಿಕೆಯಿಂದ ಇರುವಂತೆ...

ನಗೌರ್: ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಧರ್ಮದ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ರಾಜಸ್ಥಾನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಶನಿವಾರ ಆರೋಪಿಸಿದ್ದಾರೆ ಮತ್ತು ಜನ ಎಚ್ಚರಿಕೆಯಿಂದ ಇರುವಂತೆ ಕೇಳಿಕೊಂಡಿದ್ದಾರೆ.
  
ರಾಜಸ್ಥಾನದ ನಗೌರ್ ಜಿಲ್ಲೆಯ ಲಾಡ್ನೂನ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುಖೇಶ್ ಭಾಕರ್ ಅವರ ಪರವಾಗಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಪೈಲಟ್, “ಬಿಜೆಪಿ ಧರ್ಮದ ಹೆಸರಿನಲ್ಲಿ ಜನರ ನಡುವೆ ಒಡಕು ಮತ್ತು ಸಂಘರ್ಷವನ್ನು ಸೃಷ್ಟಿಸಲು ಪ್ರಯತ್ನಿಸತ್ತದೆ. ಆದರೆ ನಾವು ಜಾಗರೂಕರಾಗಿರಬೇಕು ಎಂದರು. 

ಪರ್ಬತ್ಸರ್‌ನ ಕಾಂಗ್ರೆಸ್ ಅಭ್ಯರ್ಥಿ ರಾಮ್ನಿವಾಸ್ ಗವಾಡಿಯಾ ಅವರನ್ನು ಬೆಂಬಲಿಸಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಪೈಲಟ್ ಕೂಡ ಭಾಗವಹಿಸಿದ್ದರು.

200 ಸ್ಥಾನಗಳ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

SCROLL FOR NEXT